Doddaballapura: ಶ್ರದ್ಧಾ ಭಕ್ತಿ ಸಂಭ್ರಮದಿಂದ ಹನುಮ ಜಯಂತಿ ಆಚರಣೆ

ದೊಡ್ಡಬಳ್ಳಾಪುರ (Doddaballapura): ತಾಲೂಕಿನ ವಿವಿಧ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಇದರ ಅಂಗವಾಗಿ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ನಗರದ ಗಂಗಾಧರಪುರ, ರೋಜೀಪುರದಲ್ಲಿನ ಪ್ರಸನ್ನ “ವೀರಾಂಜನೇಯ ಸ್ವಾಮಿ” ದೇವಾಲಯದಲ್ಲಿ ಮಧ್ಯಾಹ್ನ 12ಕ್ಕೆ ಹನುಮಜಯಂತಿ ಅಂಗವಾಗಿ ರಥೋತ್ಸವ ನಡೆಯಿತು.

ಇದರ ಅಂಗವಾಗಿ ಕಳೆದ 11 ದಿನಗಳಿಂದ ಹನುಮಜಯಂತಿ ಅಂಗವಾಗಿ ವಿವಿಧ ಭಜನಾ ಮಂಡಳಿಗಳ ವತಿಯಿಂದ ರಾತ್ರಿ ಹಗಲು ನಿರಂತರವಾಗಿ ಭಜನೆಗಳು ನಡೆದಿದ್ದು ಹನುಮ ಜಯಂತಿಯಂದು ಮುಕ್ತಾಯವಾಗಲಿವೆ. ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಬೆಳಿಗ್ಗೆ 5 ಗಂಟೆಗೆ ಪಂಚಮೃತ ಅಭಿಷೇಕ, 7 ಗಂಟೆಗೆ ಸುರಭಿ ಭಜನಾ ಮಂಡಲಿಯವರಿಂದ ಭಜನೆ ಕಾರ್‍ಯಕ್ರಮ, 8.30ಕ್ಕೆ ಶ್ರೀ ರಾಮತಾರಕ ಹೋಮ, ಸಂಜೆ ನೆಲದಾಂಜನೇಯ ಸ್ವಾಮಿ ಪ್ರಾಕಾರೋತ್ಸವ ವಿಶೇಷ ಅಲಂಕಾರ ಪೂಜಾ ಕಾರ್‍ಯಕ್ರಮಗಳು ನಡೆಯಿತು.

ಅರಳು ಮಲ್ಲಿಗೆ ಬಾಗಿಲು ಸರ್.ಎಂ.ವಿಶ್ವೇಶ್ವರಯ್ಯ ವೃತ್ತದ ಶ್ರೀ ಪ್ರಸನ್ನ ಆಂಜಿನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಬೆಳಿಗ್ಗೆ 6ಗಂಟೆಗೆ ಮಹಾಭಿಷೇಕ, 9 ಗಂಟೆಗೆ ವಿಶೇಷ ಅಲಂಕಾರ, 10 ಗಂಟೆಗೆ ವಿಷ್ಣು ಸಹಸ್ರ ನಾಮ ಪಾರಾಯಣ,ದೇವರ ನಾಮಗಳ ಗಾಯನ ನಡೆಯಿತು. ರಾತ್ರಿ 9 ಗಂಟೆಗೆ ಆಂಜನೇಯಸ್ವಾಮಿ ಮೆರವಣಿಗೆ ವಿಶೇಷ ಪೂಜಾ ಕಾರ್‍ಯಕ್ರಮಗಳು ಜರುಗಲಿದೆ.

ತಾಲೂಕಿನ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಶ್ರೀ ರಾಮತಾರಕ ಹೋಮ, ಹೂವಿನ ಅಲಂಕಾರ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ರೈಲ್ವೆ ನಿಲ್ದಾಣ ವೃತ್ತದ ಬಳಿಯ ಪ್ರಸನ್ನ ಆಂಜನೇಯಸ್ವಾಮಿ, ತಾಲೂಕಿನ ಕೊಡಿಗೆಹಳ್ಳಿಯ ಅಭಯ ಆಂಜನೇಯಸ್ವಾಮಿ ದೇವಾಲಯ, ಮಜರಾಹೊಸಹಳ್ಳಿಯ ಆಂಜನೇಯಸ್ವಾಮಿ, ಸಿದ್ದೇನಾಯಕನ ಹಳ್ಳಿ, ಅರಳುಮಲ್ಲಿಗೆ ಕೆರೆ ಏರಿ ಅಭಯ ಆಂಜನೇಯಸ್ವಾಮಿ.

ದೊಡ್ಡಬಳ್ಳಾಪುರ ತಾಲೂಕಿನ ಅಮಾಮ್ ಗ್ರಾಮದಲ್ಲಿ ವಾಲಿ ಸುಗ್ರೀವ ಸಮೇತ ಶ್ರೀ ಆಂಜನೇಯ ಸ್ವಾಮಿಯ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು.

ಮೂಡ್ಲು ಕಾಳೆನಹಳ್ಳಿ, ರಾಗಿರಾಯನ ಗುಡ್ಡ, ಕೆರೆ ಏರಿ ಆಂಜನೇಯಸ್ವಾಮಿ ಮೊದಲಾಗಿ ನಗರ ಹಾಗೂ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ಜರುಗಿತು.

ಶಾಂತಿನಗರದ ಮುಖ್ಯ ರಸ್ತೆಯಲ್ಲಿರುವ ಶ್ರೀ ಮುತ್ಯಾಲಮ್ಮ ಸಾಂಸ್ಕೃತಿಕ ಸೇವಾ ಸಮಿತಿ ಹಾಗೂ ಶ್ರೀ ಮಹಾವೀರ ಆಂಜಿನೇಯ ಸ್ವಾಮಿ ದೇವಾಲಯದ ವತಿಯಿಂದ ಕನ್ನಡ ರಾಜ್ಯೋತ್ಸವ, ಹನುಮ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ರಾಜಕೀಯ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು ಭಾಗಿ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ; ಬಿ. ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಕಾರ್ಯಕರ್ತರು

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B.Munegowda) ನೇತೃತ್ವದಲ್ಲಿ 90 ಬಸ್ಸು

[ccc_my_favorite_select_button post_id="105238"]
ದೊಡ್ಡಬಳ್ಳಾಪುರಕ್ಕಿಂದು ಡಿಕೆ ಶಿವಕುಮಾರ್ ಭೇಟಿ.. ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರಕ್ಕಿಂದು ಡಿಕೆ ಶಿವಕುಮಾರ್ ಭೇಟಿ.. ಕಾರಣ ಏನ್ ಗೊತ್ತಾ..?

ಮುಖ್ಯಮಂತ್ರಿ ಸ್ಥಾನದ ಪವರ್ ಶೇರಿಂಗ್ ಕುರಿತು ಕೆಲ ಖಾಸಗಿ ಚಾನಲ್ ಗಳು, ವಿರೋಧ ಪಕ್ಷಗಳ ಚರ್ಚೆಗಳ ನಡುವೆ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಮಣ್ಯ DK Shivakumar

[ccc_my_favorite_select_button post_id="105241"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!