ಜನವರಿ 05 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ| Ghati Subrahmanya

ಬೆಂಗಳೂರು ಗ್ರಾಮಾಂತರು ಜಿಲ್ಲೆ: ದೊಡ್ಡಬಳ್ಳಾಪುರದ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ (Ghati Subrahmanya) ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ 05 ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡೆಯಲಿರುವ ಬ್ರಹ್ಮರಥೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನವರಿ 05 ರಂದು ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ ಬ್ರಹ್ಮರಥೋತ್ಸವ ನಡೆಯಲಿದೆ. ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಡಿ.20 ರಿಂದ 30 ವರೆಗೆ ದನಗಳ ಜಾತ್ರೆ

ಘಾಟಿ ದನಗಳ ಜಾತ್ರೆಗೆ ವಿವಿಧ ಭಾಗಗಳಿಂದ ಸಾಕಷ್ಟು ಜಾನುವಾರುಗಳು ಆಗಮಿಸಲಿದ್ದು ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ದನಗಳ ಕಟ್ಟಿಹಾಕುವ ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸಿ ಎಂದು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಬ್ರಹ್ಮ ರಥೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಸ್ಥಳಕ್ಕೆ ತೆರಳಲು ಸೂಚನಾ ಫಲಕ ಅಳವಡಿಸುವ ಮೂಲಕ ವಾಹನ ದಟ್ಟಣೆ ಆಗದಂತೆ ಕ್ರಮ ವಹಿಸಿ ಎಂದರಲ್ಲದೆ, ಬ್ರಹ್ಮ ರಥೋತ್ಸವ ದಿನ ಹೆಚ್ಚುವರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಿ. ಸಾರ್ವಜನಿಕರು ಪಾರ್ಕಿಂಗ್ ಸ್ಥಳದಿಂದ ದೇವಾಲಯಕ್ಕೆ ತೆರಳಲು ಹಾಗೂ ಮರಳಲು ಉಚಿತ ವಾಹನ ವ್ಯವಸ್ಥೆ ಮಾಡಿ ಎಂದರು.

ಸಾರ್ವಜನಿಕರಿಗೆ ಉಚಿತ ಊಟದ ವ್ಯವಸ್ಥೆ, ಕುಡಿಯುವ ನೀರನ್ನು ವ್ಯವಸ್ಥಿತವಾಗಿ ಪೂರೈಸಿ ಹಾಗೂ ಹೆಚ್ಚುವರಿಯಾಗಿ ತಾತ್ಕಾಲಿಕ ಶೌಚಾಲಯಗಳನ್ನು ಒದಗಿಸಿ ಎಂದು
ಘಾಟಿ ದೇವಾಲಯದ ಅಧಿಕಾರಿಗಳಿಗೆ ಸೂಚಿಸಿದರು.

ಪ್ಲಾಸ್ಟಿಕ್ ಬಳಕೆ ನಿಷೇಧ

ಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ದೇವಾಲಯ ಆವರಣದಲ್ಲಿರುವ ಅಂಗಡಿ ಮಳಿಗೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿ ಸಾರ್ವಜನಿಕರು ಕೂಡ ಪ್ಲಾಸ್ಟಿಕ್ ಬಳಸದಂತೆ ಜಿಲ್ಲಾಧಿಕಾರಿಯವರು ಮನವಿ ಮಾಡಿದರು.

ದೇವಾಲಯದ ಸುತ್ತಮುತ್ತಲೂ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕಾಗಿ ನಗರಸಭೆಯಿಂದ ಪೌರಕಾರ್ಮಿಕರನ್ನು ನೇಮಿಸುವಂತೆ ಪೌರಾಯುಕ್ತರಿಗೆ ಸೂಚಿಸಿದರು. ತುರ್ತು ಆರೋಗ್ಯ ಚಿಕಿತ್ಸಾ ಕೇಂದ್ರ ಹಾಗೂ ಅಂಬುಲೆನ್ಸ್ ಸೇವೆ ಒದಗಿಸುವಂತೆ ಆರೊಗ್ಯಾಧಿಕಾರಿಗಳಿಗೆ ಸೂಚಿಸಿದರು. ಜಾತ್ರಾ ಮಹೋತ್ಸವದಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಘಾಟಿ ಸುಬ್ರಮಣ್ಯ ದೇವಾಲಯದ ಆಡಳಿತಾಧಿಕಾರಿ ಅಮರೇಶ ಹೆಚ್, ಜಿ. ಪಂ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಡಿವೈಎಸ್ಪಿ ರವಿ, ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ದಿನೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್, ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ. ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಐವತ್ತು ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ Basavaraj Bommai

[ccc_my_favorite_select_button post_id="105001"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

ದೇವಾಲಯದ ಬಾಗಿಲು ಮೀಟಿ ಒಳಬಂದಿರುವ ಅಪರಿಚಿತ ದುಷ್ಕರ್ಮಿ, ಹುಂಡಿಯನ್ನು ಹೊಡೆದು ಕಳ್ಳವು ನಡೆಸಿದ್ದಾನೆ ಎನ್ನಲಾಗಿದೆ. Doddaballapura

[ccc_my_favorite_select_button post_id="104979"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!