ಕ್ವಿನ್ ಸಿಟಿ ಬೆನ್ನಲ್ಲೇ ರಾಜ್ಯದಲ್ಲಿ ಸ್ವಿಫ್ಟ್ ಸಿಟಿ ಹೊಂಗನಸು..!: ಎಂಬಿ ಪಾಟೀಲ ಕನಸಿನ ನಗರ ಹೇಗಿರುತ್ತೆ ಗೊತ್ತಾ..?| SWIFT city

ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT City- Startup, Work-Spaces, Intelligence, Finance & Technology) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಮುಂದಾಗಿದ್ದಾರೆ.

ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ. ಇದನ್ನು ಸಾಧಿಸಲು ಸರ್ಜಾಪುರ ಕೈಗಾರಿಕಾ ಪ್ರದೇಶದಲ್ಲಿ 1,000 ಎಕರೆಗೂ ಹೆಚ್ಚು ಜಮೀನನ್ನು ಮೀಸಲಿಡಲಾಗುವುದು ಎಂದು ಅವರು ತಮ್ಮ ಮಹತ್ವಾಕಾಂಕ್ಷೆಯನ್ನು ಹಂಚಿಕೊಂಡಿದ್ದಾರೆ.

ಇದನ್ನು ಮೂಲಭೂತವಾಗಿ ನಾವೀನ್ಯತೆ ಮತ್ತು ಬೆಳವಣಿಗೆಗಳ ಆಡುಂಬೊಲವನ್ನಾಗಿ ಬೆಳೆಸಬೇಕು ಎನ್ನುವುದು ಅವರ ದೂರದೃಷ್ಟಿಯಾಗಿದೆ.

‘ಬೆಂಗಳೂರಿನಲ್ಲಿ ಇಂದು ಸಾವಿರಾರು ಕಂಪನಿಗಳಿವೆ, ನಿಜ. ಆದರೆ ಇವುಗಳಿಗೆ ಯೋಜಿತ ಮತ್ತು ವ್ಯವಸ್ಥಿತ ತಾಣಗಳಿಲ್ಲ ಎನ್ನುವ ಅಸಮಾಧಾನ ಹಲವರಲ್ಲಿದೆ. ಆದ್ದರಿಂದ ಸರ್ಜಾಪುರದಲ್ಲಿ ಇಂತಹ ಹೆಜ್ಜೆ ಇಡಲಾಗುತ್ತದೆ. ಇಲ್ಲಿ 150 ಮೀ. ಅಗಲದ ಸಂಪರ್ಕ ರಸ್ತೆ ಮಾಡಿ, ಅಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿ ಪಡಿಸಲಾಗುವುದು. ನೆರೆ ರಾಜ್ಯಗಳಿಂದ ನಮಗೆ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಇಂತಹ ಉಪಕ್ರಮ ಅನಿವಾರ್ಯ’ ಎನ್ನುವುದು ಅವರ ಮುಂದಾಲೋಚನೆ ಆಗಿದೆ.

ಈ ಬಗ್ಗೆ ತಮ್ಮ ಚಿಂತನೆಗಳನ್ನು ಹಂಚಿಕೊಂಡಿರುವ ಅವರು, `ಸರ್ಜಾಪುರ ಪ್ರದೇಶವು ರಾಜಧಾನಿಯಲ್ಲಿರುವ ಐಟಿ ತಾಣಗಳಿಗೆ ಹತ್ತಿರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ 44 ಮತ್ತು 48ಕ್ಕೆ ಹತ್ತಿರಲ್ಲಿದೆ. ಸಂಪರ್ಕ ಸೌಲಭ್ಯದ ದೃಷ್ಟಿಯಿಂದ ಇದು ವರದಾನವಾಗಿದ್ದು, ಈ ಭಾಗದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆಗೆ ಇಂಬು ನೀಡಲು ಸೂಕ್ತ ಸ್ಥಳವಾಗಿದೆ.

ಇದನ್ನೆಲ್ಲ ಪರಿಗಣಿಸಿ, ಇದನ್ನು ಸ್ವಿಫ್ಟ್ ಸಿಟಿಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದು ಸ್ಟಾರ್ಟಪ್ ಹಬ್ ಆಗಲಿದ್ದು, ಇಲ್ಲಿ 8-10 ಅತ್ಯಾಧುನಿಕ ಪ್ಲಗ್ ಅಂಡ್ ಪ್ಲೇ ಸೌಲಭ್ಯಗಳು ಇರಲಿವೆ. ಇಂತಹ ಒಂದೊಂದು ಸ್ಥಾವರಕ್ಕೂ 20-25 ಎಕರೆ ಕೊಡಲಾಗುವುದು’ ಎಂದಿದ್ದಾರೆ.

ಈ ಪ್ಲಗ್ ಅಂಡ್ ಪ್ಲೇ ಪ್ರದೇಶದಲ್ಲಿ ಸುಸಜ್ಜಿತ ಕಚೇರಿಗಳು, ವಸತಿ ಪ್ರದೇಶಗಳು, ಕೋ-ವರ್ಕಿಂಗ್ ತಾಣಗಳು ಎಲ್ಲವೂ ಇರಲಿವೆ. ಈ ಮೂಲಕ ಉದ್ಯಮಗಳ ಒಂದು ವ್ಯವಸ್ಥಿತ ಜಾಲ ಏರ್ಪಡಲಿದ್ದು, ಅವು ಪರಸ್ಪರ ಸಹಭಾಗಿತ್ವ ಏರ್ಪಡಿಸಿಕೊಳ್ಳುವುದು ಸುಗಮವಾಗಲಿದೆ.

ಮುಖ್ಯವಾಗಿ, ಇಡೀ ರಾಜ್ಯವನ್ನೇ ಹಂತಹಂತವಾಗಿ ‘ಸಿಲಿಕಾನ್ ರಾಜ್ಯ’ವನ್ನಾಗಿ ಮಾಡಲಾಗುವುದು. ಸಿಲಿಕಾನ್ ಸಿಟಿ ಅಂದ್ರೆ ಬೆಂಗಳೂರು. ಈಗ ಅದನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶ. ವಿಜಯಪುರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಐದು ನಗರಗಳಲ್ಲಿ ಮಿನಿ ಕ್ವಿನ್ ಸಿಟಿ ಅಭಿವೃದ್ಧಿಪಡಿಸುವುದರ ಮೂಲಕ ಇದನ್ನು ಸಾಕಾರಗೊಳಿಸುವ ಉದ್ದೇಶ ಇದೆ. ಇದಕ್ಕೆ ಐಟಿ ಇಲಾಖೆಯ ಸಹಕಾರವನ್ನೂ ಪಡೆಯಲಾಗುವುದು. ಫೆಬ್ರವರಿಯಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಸಂಬಂಧ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪಾಟೀಲ ವಿವರಿಸುತ್ತಾರೆ.

ಇದಲ್ಲದೆ, ಸ್ವಿಫ್ಟ್ ಸಿಟಿಯಲ್ಲಿ ನೆಲೆಯೂರಲಿರುವ ಸಣ್ಣ ಮತ್ತು ಮಧ್ಯಮ ಸ್ತರದ ಸ್ಟಾರ್ಟಪ್ ಉದ್ಯಮಗಳಿಗೆ ಕನಿಷ್ಠ 5,000 ಚದರ ಅಡಿಗಳಿಂದ ಹಿಡಿದು ಗರಿಷ್ಠ 20,000 ಚದರ ಅಡಿಗಳಷ್ಟು ಜಾಗವನ್ನು ಭೋಗ್ಯ, ಕ್ರಯ ಅಥವಾ ಬಂಡವಾಳ ಆಧರಿತ ಹಂಚಿಕೆ ಮಾದರಿಯಲ್ಲಿ ಒದಗಿಸಲಾಗುವುದು. ಈ ಮೂಲಕ, ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ಬಗೆಯ ಉದ್ಯಮಗಳ ಅಗತ್ಯಗಳನ್ನು ಪೂರೈಸುವುದು ಸಾಧ್ಯವಾಗಬೇಕೆನ್ನುವುದು ನಮ್ಮ ಚಿಂತನೆಯಾಗಿದೆ. ಮುಖ್ಯವಾಗಿ ಇದು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಡೇಟಾ ಅನಲಿಟಿಕ್ಸ್ ಮತ್ತು ಫಿನ್-ಟೆಕ್ ನಾವೀನ್ಯತಾ ಕೇಂದ್ರವಾಗಿಯೂ ಮುಂಚೂಣಿಗೆ ಬರಲಿದೆ ಎಂದು ಹೇಳಲು ಅವರು ಮರೆಯುವುದಿಲ್ಲ.

ಇದು ತೀವ್ರ ಸ್ಪರ್ಧೆಯಿಂದ ಕೂಡಿರುವ ಕಾಲಘಟ್ಟ. ಕೈಗಾರಿಕೋದ್ಯಮದ ದೃಷ್ಟಿಯಿಂದ ಇಡೀ ಕರ್ನಾಟಕವು ಸೂಜಿಗಲ್ಲಿನಂತೆ ಹೂಡಿಕೆದಾರರನ್ನು ಸೆಳೆಯುವಂತಿರಬೇಕು. ಇದಕ್ಕಾಗಿ ಸ್ವಿಫ್ಟ್ ಸಿಟಿ ತರಹದ ವಿನೂತನ ಪರಿಕಲ್ಪನೆಗಳು ಅತ್ಯಗತ್ಯ. ಇಲ್ಲದೆ ಹೋದರೆ, ನೆರೆಹೊರೆಯ ರಾಜ್ಯಗಳು ಇಂಥ ಅವಕಾಶಗಳನ್ನು ಬಾಚಿಕೊಂಡು ಬಿಡುತ್ತವೆ. ಎಲ್ಲರಿಗಿಂತ ಮೊದಲೇ ನಾವು ದಾಪುಗಾಲಿಟ್ಟುಕೊಂಡು ಮುನ್ನುಗ್ಗಬೇಕು ಎನ್ನುವುದು ರಾಜ್ಯ ಸರಕಾರದ ಸಂಕಲ್ಪ. ಇದರಿಂದ ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಈ ಮೂರನ್ನೂ ಒಟ್ಟಿಗೇ ಸಾಧಿಸಬಹುದು; ಎಂ ಬಿ ಪಾಟೀಲ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ.

ರಾಜಕೀಯ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ತಮಿಳುನಾಡು BJP ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನಾನಿಲ್ಲ; ಅಣ್ಣಾಮಲೈ

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ Annamalai

[ccc_my_favorite_select_button post_id="104958"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

ದೇವಾಲಯದ ಬಾಗಿಲು ಮೀಟಿ ಒಳಬಂದಿರುವ ಅಪರಿಚಿತ ದುಷ್ಕರ್ಮಿ, ಹುಂಡಿಯನ್ನು ಹೊಡೆದು ಕಳ್ಳವು ನಡೆಸಿದ್ದಾನೆ ಎನ್ನಲಾಗಿದೆ. Doddaballapura

[ccc_my_favorite_select_button post_id="104979"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!