Site icon ಹರಿತಲೇಖನಿ

ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ..!| Suicide

Friend commits suicide due to the mistake of lending to a friend..!

Friend commits suicide due to the mistake of lending to a friend..!

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೆಚ್.ಸಿ.ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಎಂದು ಗುರುತಿಸಲಾಗಿದೆ.

ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಿಪ್ಪಣ್ಣ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ಪತ್ನಿ ಹಾಗೂ ಮಾವ ಕಾರಣ ಎಂದು ಹೇಳಿದ್ದಾರೆ.

ಡೆತ್‌ ನೋಟ್‌ನಲ್ಲಿ ನಾನು ನನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿಯ ತಂದೆಯಾದ ಯಮುನಪ್ಪ ಇವನು ನನಗೆ ಜೀವ ಬೆದರಿಕೆ ಹಾಕಿರುತ್ತಾನೆ. ನೀನು ಸತ್ತು ಹೋಗು ನನ್ನ ಮಗಳು ಚೆನ್ನಾಗಿರುತ್ತಾಳೆ ಎಂದು ಹೇಳಿ ಅವಾಚ್ಯ ಪದಗಳಿಂದ ಬೈದಿದ್ದಾರೆ ಎಂದು ಬರೆದಿದ್ದಾರೆ.

ಘಟನೆ ಸಂಬಂಧ ಬೈಯ್ಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಪ್ಪಣ್ಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಆಗಿ ಕೆಲಸ ಮಾಡಿಕೊಂಡಿದ್ದರು. ಸದ್ಯ ಸಿವಿ ರಾಮನ್ ನಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ ಎಂದು ವರದಿಯಾಗಿದೆ.

Exit mobile version