ಹೈದರಾಬಾದ್: Pushpa 2 ಸಿನಿಮಾ ಬಿಡುಗಡೆ ನಂತರ ಒಂದಿಲ್ಲೊಂದು ವಿಚಾರಗಳಿಗೆ ನೆರೆಯ ರಾಜ್ಯ ಹೈದರಾಬಾದ್ ಸುದ್ದಿಯಾಗುತ್ತಿದೆ.
ನಿನ್ನೆ ಯಷ್ಟೇ ಪೊಲೀಸರಿಂದ ನಟ ಅಲ್ಲು ಅರ್ಜುನ್ ಬಂಧನ, 14 ದಿನ ನ್ಯಾಯಾಂಗ ವಶಕ್ಕೆ ಆದೇಶ, ಇಂದು ಬೇಲ್ ಮೇಲೆ ಬಿಡುಗಡೆ ಬೆನ್ನಲ್ಲೇ.. ಅಲ್ಲು ಅರ್ಜುನ್ ಅಭಿಮಾನಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಿನ್ನೆ ರಾತ್ರಿ ನಟ ಅಲ್ಲು ಅರ್ಜುನ್ ಬಿಡುಗಡೆಗೆ ಒತ್ತಾಯಿಸಿ ಅವರ ಅಭಿಮಾನಿಯೊಬ್ಬರು ತೆಲಂಗಾಣದ ಚಂಚಲಗುಡ ಜೈಲಿನ ಹೊರಗೆ ಆತ್ಮಹತ್ಯೆಗೆ ಯತ್ನಿಸಿದ ವಿಡಿಯೋ ಇದೀಗ ಹರಿದಾಡುತ್ತಿದೆ.
ಕೆಲ ದಿನಗಳ ಹಿಂದೆ ಪುಷ್ಪ 2 ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ರನ್ನು ಬಂಧಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಇಂದು ಬೆಳಗ್ಗೆ 6.30ಕ್ಕೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಆದರೆ, ಅಲ್ಲು ಅರ್ಜುನ್ ಜೈಲಿನಲ್ಲಿದ್ದಾಗ, ಅಭಿಮಾನಿಯೊಬ್ಬರು ನಟನನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೇ ಅಭಿಮಾನಿ ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಘಟನೆ ಹಿನ್ನೆಲೆಯಲ್ಲಿ ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.