ದೊಡ್ಡಬಳ್ಳಾಪುರ, (Doddaballapura): ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶಾಲಾ ಮಕ್ಕಳಿಗೆ ಕರ್ನಾಟಕ ಪೊಲೀಸ್ ಪಡೆಯ ಪ್ರಾಮುಖ್ಯತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಕುರಿತು ಅರಿವು ಮೂಡಿಸಿದ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ ವಿದ್ಯಾರ್ಥಿಗಳು, ಮುಖ್ಯ ಶಿಕ್ಷಕರು ಮತ್ತು ಸಹಶಿಕ್ಷಕರು ಸನ್ಮಾನಿಸಿದರು.
ಇಂದು ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ನಳಂದ ಪ್ರೌಢಶಾಲೆ ಮತ್ತು ಲಿಟ್ಲ್ ಏಂಜೆಲ್ಸ್ ಅನಂತ ಶಾಲೆಯ ವಿದ್ಯಾರ್ಥಿಗಳು, ಮುಖ್ಯ ಶಿಕ್ಷಕರು ಮತ್ತು ಸಹಶಿಕ್ಷಕರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು, ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳ ಕಾರ್ಯಾ ವೈಖರಿಯನ್ನು ವಿವರಿಸಿದರು.
ದೇಶದ ಗಡಿ ಕಾಯಲು ಸೈನ್ಯವು ಎಷ್ಟು ಮುಖ್ಯವೋ ದೇಶದ ಆಂತರಿಕ ಭದ್ರತೆಯನ್ನು ಕಾಪಾಡಲು ಪೊಲೀಸ್ ಪಡೆ ಕೂಡ ಅಷ್ಟೇ ಮುಖ್ಯವಾಗಿದ್ದು, ನಮ್ಮನ್ನು ಕಾಯುವ ರಕ್ಷಕರನ್ನು ಸನ್ಮಾನಿಸಲು ದೊರಕಿದ ಅವಕಾಶಕ್ಕಾಗಿ ಶಾಲೆಯ ವತಿಯಿಂದ ಕೃತಜ್ಞತೆಗಳನ್ನು ಅರ್ಪಿಸಲಾಯಿತು ಎಂದು ಶಾಲಾ ಮುಖ್ಯ ಶಿಕ್ಷಕರಾದ ಅನಿತಾ ಕೆಪಿ., ಸುನಿತಾ ಪಿ ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.