ಶಿವಮೊಗ್ಗ: ಕರ್ನಾಟಕ ಬಿಜೆಪಿ (BJP) ರಾಜ್ಯಾಧ್ಯಕ್ಷ ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅಭಿ ಪ್ರಾಯಪಟ್ಟಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಸರಕಾರದಲ್ಲಿ ಸಚಿವರಾಗಿರುವುದರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಹೀಗಾಗಿ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರ ಸ್ಥಾನ ಖಾಲಿ ಯಾಗುವ ನಿರೀಕ್ಷೆ ಇದೆ. ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದರು.
ಕಳೆದ 30 ವರ್ಷದಿಂದ ರಾಜಕಾರಣದಲ್ಲಿ ಇದ್ದೇನೆ. ಕಾಂಗ್ರೆಸ್ ನಲ್ಲಿ ಅಹಿಂದ ಸಂಘಟನೆಯಿದ್ದು ಅದಕ್ಕೆ ವಿರುದ್ದವಾಗಿ ಹಾಗೂ ಬಿಜೆಪಿ ಓಬಿಸಿ ಸಂಘಟನೆ ಹೆಚ್ಚು ಒತ್ತು ನೀಡಲು ಒಬಿಸಿ ನಾಯಕರಿಗೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.