ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ಗೆ ಒಳಗಾದರು, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (pradeep eshwar) ಕ್ಷೇತ್ರದಲ್ಲಿ ವಿನೂತನ ಪ್ರಯತ್ನಗಳ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಆರಂಭಿಸಿರುವ, ನಮ್ಮ ಊರಿಗೆ ನಮ್ಮ ಶಾಸಕರು ಕಾರ್ಯಕ್ರಮ ವ್ಯಾಪಕ ಪ್ರಶಂಶೆಗೆ ಕಾರಣವಾಗಿದೆ. ಈ ಕುರಿತು ಸ್ವತಃ ಸಿಎಂ ಸಿದ್ದರಾಮಯ್ಯ ಶಾಸಕ ಪ್ರದೀಪ್ ಈಶ್ವರ್ ಕಾರ್ಯವೈಖರಿಯನ್ನು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಸಿಎಂ, ಮಟ್ಟದ ಅಧಿಕಾರಿಗಳ ತಂಡಕಟ್ಟಿಕೊಂಡು, ಗ್ರಾಮಗಳಿಗೆ ತೆರಳಿ ಜನರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಅಥವಾ ಕಾಲಮಿತಿಯಲ್ಲಿ ಅದನ್ನು ಪರಿಹರಿಸುವ ಕಾರ್ಯ ಕೈಗೆತ್ತಿಕೊಂಡಿರುವ ಶಾಸಕ ಪ್ರದೀಪ್ ಈಶ್ವರ್ ಅವರ ವಿನೂತನ ಪ್ರಯತ್ನಕ್ಕೆ ಬೆನ್ನುತಟ್ಟಿ ಶುಭ ಹಾರೈಸಿದೆ ಎಂದಿದ್ದಾರೆ.
ಇಂತಹ ಜನಪರವಾದ ಕಾರ್ಯಗಳಿಗೆ ನನ್ನ ಹಾಗೂ ನಮ್ಮ ಸರ್ಕಾರದ ಬೆಂಬಲ ಸದಾಕಾಲ ಇರಲಿದೆ ಎಂಬ ವಿಶ್ವಾಸವನ್ನು ಅವರಲ್ಲಿ ತುಂಬಿದ್ದೇನೆ.
“ನಮ್ಮ ಊರಿಗೆ ನಮ್ಮ ಶಾಸಕರು” ಕಾರ್ಯಕ್ರಮದ ಯಶಸ್ಸಿಗಾಗಿ ಶಾಸಕರಾದ ಪ್ರದೀಪ್ ಈಶ್ವರ್ ಅವರ ಹೆಗಲಿಗೆ ಹೆಗಲಾಗಿ ದುಡಿಯುತ್ತಿರುವ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ಮಂಚೇನಹಳ್ಳಿ ತಹಶೀಲ್ದಾರ್ ದೀಪ್ತಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಯ್ಯ ಅವರ ಶ್ರಮ ಕೂಡ ಶ್ಲಾಘನೀಯ.
ತಾಲೂಕು ಮಟ್ಟದ ಅಧಿಕಾರಿಗಳ ತಂಡಕಟ್ಟಿಕೊಂಡು, ಗ್ರಾಮಗಳಿಗೆ ತೆರಳಿ ಜನರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಅಥವಾ ಕಾಲಮಿತಿಯಲ್ಲಿ ಅದನ್ನು ಪರಿಹರಿಸುವ ಕಾರ್ಯ ಕೈಗೆತ್ತಿಕೊಂಡಿರುವ ಶಾಸಕ ಪ್ರದೀಪ್ ಈಶ್ವರ್ ಅವರ ವಿನೂತನ ಪ್ರಯತ್ನಕ್ಕೆ ಬೆನ್ನುತಟ್ಟಿ ಶುಭ ಹಾರೈಸಿದೆ.
— Siddaramaiah (@siddaramaiah) December 16, 2024
ಇಂತಹ ಜನಪರವಾದ ಕಾರ್ಯಗಳಿಗೆ ನನ್ನ ಹಾಗೂ ನಮ್ಮ ಸರ್ಕಾರದ ಬೆಂಬಲ ಸದಾಕಾಲ… pic.twitter.com/4w5L4p0DNf
ಇದುವರೆಗೆ ಸುಮಾರು 50 ಹಳ್ಳಿಗಳಿಗೆ ತೆರಳಿ ರಸ್ತೆ, ಚರಂಡಿ, ಬಸ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಪಿಂಚಣಿ, ನಿವೇಶನ ಹೀಗೆ ಸಾರ್ವಜನಿಕರ ನಿತ್ಯ ಬದುಕಿಗೆ ತೊಡಕಾಗಿದ್ದ ಹಲವು ಸಮಸ್ಯೆಗಳನ್ನು ಆಲಿಸಿ, ಪರಿಹರಿಸಿದ್ದಾರೆ. ಈ ಕಾರ್ಯಕ್ರಮ ಇನ್ನಷ್ಟು ಜನರನ್ನು ತಲುಪುವ ಮೂಲಕ ಜನರ ಜೀವನಮಟ್ಟ ಸುಧಾರಿಸಲು ನೆರವಾಗಲಿ ಎಂದು ಆಶಿಸುತ್ತೇನೆ ಎಂದು ಸಿಎಂ ನುಡಿದಿದ್ದಾರೆ.