ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿ ಗ್ರಾಮದ ಹೊರವಲಯದಲ್ಲಿ ಚಿರತೆ (leopard) ಕಂಡು ಬಂದಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಇಂದು (ಮಂಗಳವಾರ) ಬೆಳಗ್ಗೆ ಗ್ರಾಮದ ಹೊರವಲಯದಲ್ಲಿರುವ ಹಳೇ ರೋಡ್ ಬಳಿಯ ಜಮೀನಿನಲ್ಲಿ ಬೆಳೆದಿರುವ ಸುಕಂದರಾಜ ಹೂ ಬಿಡಿಸಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ರೈತನಿಗೆ ಏಕಾಏಕಿ ಚಿರತೆ ಎದುರಾಗಿದೆ. ಈ ವೇಳೆ ದ್ವಿಚಕ್ರ ವಾಹನವನ್ನು ಹಿಂದಕ್ಕೆ ತಿರುಗಿಸಿಕೊಳ್ಳಲಾಗದೆ ಅಲ್ಲಿಯೇ ಬಿಟ್ಟು ಸ್ಥಳದಿಂದ ಓಡಿಬಂದಿದ್ದಾರೆ.
ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಆರೂಢಿ, ಅಮಲಗುಂಟೆ, ಗರಿಕೇನಹಳ್ಳಿ, ಬನವತಿ ವ್ಯಾಪ್ತಿಯ ಜಮೀನಿನಲ್ಲಿ ಹಲವು ದಿನಗಳಿಂದ ಚಿರತೆ ಓಡಾಡುತ್ತಿದ್ದು, ಗ್ರಾಮಸ್ಥರ ಆತಂಕ ಹೆಚ್ಚಿಸಿದೆ.
ದಾಬಸ್‌ಪೇಟೆ ವ್ಯಾಪ್ತಿಯಲ್ಲಿ ಮಹಿಳೆಯೋರ್ವರ ರುಂಡ ಭಕ್ಷಿಸಿದ ಘಟನೆ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ, ಏಕಾಏಕಿ ಆರೂಢಿ ವ್ಯಾಪ್ತಿಯಲ್ಲಿ ಚಿರತೆ ಕಂಡುಬಂದಿರುವುದು, ಗ್ರಾಮಸ್ಥರ ನೆಮ್ಮದಿ ಕೆಡಿಸಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)