ಹರಿತಲೇಖನಿ

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ: ಉಮಾರಬ್ಬ ಮನವಿ| Drug addiction

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದು (Drug addiction) ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಕಳವಳ ವ್ಯಕ್ತಪಡಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ದೊಡ್ಡಬೆಳವಂಗಲ ವಲಯದ ಹುಲಿಕುಂಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಮಾದಕ ವ್ಯಸನಗಳ ದುಷ್ಪರಿಣಾಮಗಳ ಅರಿವಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭಾರತ ವಿಶ್ವದಲ್ಲಿ ಅತೀ ಹೆಚ್ಚು ಯುವಕ ಯುವತಿಯರನ್ನು ಹೊಂದಿದ ದೇಶವಾಗಿದೆ. ಆದರೆ ಆತಂಕಕಾರಿ ಬೆಳವಣಿಗೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ದುಶ್ಚಟ ಮುಕ್ತ ದೇಶದ ಕನಸನ್ನು ಕಂಡಿದ್ದರು, ಆ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ವ್ಯಸನ ಮುಕ್ತ ಸಮಾಜಕ್ಕೆ ಅರಿವು ಕಾರ್ಯಕ್ರಮಗಳು ಅತಿ ಮುಖ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಗೋವಿಂದರಾಜು ಮಾತನಾಡಿ, ಶಾಲೆ- ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರಲಿದೆ ಎಂದು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ಮುನಿ ಕೃಷ್ಣಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾದಿಕಾರಿಗಳು ಸುಧಾ ಭಾಸ್ಕರ್, ವಲಯ ಮೇಲ್ವಿಚಾರಕಿ ಅನ್ನಪೂರ್ಣ ಸೇರಿದಂತೆ, ಸೇವಾಪ್ರತಿನಿಧಿಗಳು, ಶಾಲಾ ಶಿಕ್ಷಕರು ಇದ್ದರು.

Exit mobile version