ನವದೆಹಲಿ: ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೇಂದ್ರ ಸಚಿವ ಅಮಿತ್ ಶಾ ನೀಡಿದ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಸಂಸದರು ಪ್ರತಿಭಟಿಸುವಾಗ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿ ನಡೆದ ಘರ್ಷಣೆಗೆ ಸಂಬಂಧಿಸಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುಧ ಎಫ್‌ಐಆರ್ (FIR) ದಾಖಲಾಗಿದೆ.
ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾಗ ಉಂಟಾದ ನೂಕಾಟದಲ್ಲಿ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡಿದ್ದು, ಇದಕ್ಕೆ ರಾಹುಲ್ ಗಾಂಧಿ ಕಾರಣ ಎಂದು ಆರೋಪಿಸಿ ಇದೀಗ ಸಂಸತ್ ಸ್ಟ್ರೀಟ್ ಠಾಣೆಯಲ್ಲಿ ಬಿಜೆಪಿ ಸಂಸದರು ಸೇರಿ ರಾಹುಲ್ ವಿರುದ್ಧ ದೂರು ನೀಡಿದ್ದಾರೆ.
ರಾಹುಲ್ ಗಾಂಧಿ ಅವರು ತಳ್ಳಿದ್ದರಿಂದಲೇ ತಲೆಗೆ ಗಾಯವಾಗಿದೆ. ನನ್ನ ಮೇಲೆ ಬಿದ್ದ ಸಂಸದರನ್ನು ರಾಹುಲ್ ತಳ್ಳಿದ್ದರು. ಆಗ ನಾನು ಕೆಳಗೆ ಬೀಳುವಂತಾಯಿತು. ಸಂಸತ್ ಮೆಟ್ಟಿಲುಗಳ ಬಳಿ ನಿಂತಿದ್ದಾಗ ರಾಹುಲ್ ನನ್ನ ಮೇಲೆ ಬಿದ್ದ ಸಂಸದನನ್ನು ತಳ್ಳಿದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಮತ್ತೊಂದೆಡೆ ಬಿಜೆಪಿ ರಾಜ್ಯಸಭಾ ಸಂಸದೆ ಎಸ್ ಫಾಂಗ್ನಾನ್ ಕೊನ್ಯಾಕ್ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಖರ್ ಅವರಿಗೆ ಪತ್ರ ಬರೆದಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಗಂಭೀರವಾದ ಆರೋಪ ಹೊರಿಸಿದ್ದಾರೆ.
ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಫಾಂಗ್ಲಾನ್ ಕೊನ್ಯಾಕ್, ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರತಿಭಟನೆಯ ವೇಳೆ ತೀರಾ ಹತ್ತಿರ ಬಂದು ನನಗೆ ಮುಜುಗರಕ್ಕೀಡು ಮಾಡಿದ್ದಾರೆ. ಅವರ ಈ ವರ್ತನೆ ನನಗೆ ಇಷ್ಟವಾಗಲಿಲ್ಲ. ಮತ್ತು ಅವರು ಹತ್ತಿರ ಬಂದು ಗೂಗಾಡಲು ಪ್ರಾರಂಭಿಸಿದ್ದರು. ಆ ಸಂದರ್ಭ ಏನೇ ನಡೆದಿದ್ದರೂ ತುಂಬಾ ದುರದೃಷ್ಟಕರವಾಗಿತ್ತು. ಆ ರೀತಿ ನಡೆಯಬಾರದಾಗಿತ್ತು. ನಾನು ಅವರ ನಡೆತೆಯನ್ನು ಖಡಿಸುತ್ತೇನೆ. ಈ ಘಟನೆಯ ಬಗ್ಗೆ ಅಧ್ಯಕ್ಷರಿಗೂ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.