ನವದೆಹಲಿ: ಗೃಹಸಚಿವ ಅಮಿತ್ ಶಾ ಸಂಸತ್ ನಲ್ಲಿ ಡಾ.ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆಯಿಂದ ಭುಗಿಲೆದ್ದಿರುವ ಆಕ್ರೋಶ ಇವತ್ತು ಮತ್ತೊಂದು ಹಂತಕ್ಕೆ ಹೋಗಿದೆ (Parliament Highdrama).
ಸಂಸತ್ತಿನ ಹೊರಗೆ ಕಾಂಗ್ರೆಸ್ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ, ಸಂಸದರೊಂದಿಗೆ ಸಂಸತ್ನ ಮಕರ ದ್ವಾರವನ್ನು ತಲುಪಿದಾಗ ನನ್ನನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ನಾನು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದೆ.
Here is the letter from Congress President Shri @kharge to the Hon'ble @loksabhaspeaker, urging him to order an inquiry into the incident, which is an assault not just on him personally, but also on the Leader of the Opposition, Rajya Sabha and the Congress President. pic.twitter.com/oFiAjp5ShE
— Congress (@INCIndia) December 19, 2024
ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣಕಾಲುಗಳಿಗೆ ಗಾಯವಾಗಿದೆ , ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಬೆಂಬಲದಿಂದ 11 ಗಂಟೆಗೆ ಸದನಕ್ಕೆ ಕುಂಟುತ್ತಾ ಬಂದೆ ಎಂದು ಆರೋಪ ಮಾಡಿ ಸ್ಪೀಕರ್ಗೆ ಖರ್ಗೆ ಪತ್ರ ಬರೆದಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ತಲೆಗೆ ಗಾಯವಾಗಿದ್ದು, ಈ ಆರೋಪದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಯವರಿಗೆ ಪೆಟ್ಟಾಗಿದೆ.