ಉತ್ತರಕನ್ನಡ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆತರುತ್ತಿದ್ದ ಬಸ್ ಪಲ್ಟಿಯಾಗಿ (Accident) 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಕೋಲಾರದ ಮಾಲೂರು ಮಾಸ್ತಿಹಳ್ಳ ಪ್ರೌಢಶಾಲೆಯಿಂದ ವಿದ್ಯಾರ್ಥಿಗಳು ಗೋಕರ್ಣ ಪ್ರವಾಸಕ್ಕೆ ಬಂದಿದ್ದರು. ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಹೊನ್ನಾವರ ಮುಗ್ವಾ ಅರೊಳ್ಳಿ ಕ್ರಾಸ್ ಬಳಿ ಗುರುವಾರ ಮಧ್ಯರಾತ್ರಿ ಬಸ್ ಪಲ್ಟಿಯಾಗಿದೆ.
ಈ ದುರ್ಘಟನೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸದ್ಯ ಗಾಯಗೊಂಡ ವಿದ್ಯಾರ್ಥಿಗಳಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅವರನ್ನು ಮಣಿಪಾಲಕ್ಕೆ ಚಿಕಿತ್ಸೆಗಾಗಿ ಸಾಗಿಸಲಾಗಿದೆ.
ಇತ್ತೀಚೆಗೆ ಕೋಲಾರದಿಂದ ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದರು.