Site icon Harithalekhani

ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ| CT Ravi

ಬೆಳಗಾವಿ: ಮಾಜಿ ಸಚಿವರು ಹಾಗೂ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ಬಂಧನ ಖಂಡಿಸಿ ಪ್ರತಿಭಟನೆ ಬೆಳಗಾವಿಯ ಚನ್ನಮ್ಮ ವೃತ್ತದ ಬಳಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು ಕಾಂಗ್ರೆಸ್ ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಿದವರು ಹಾಗೂ ನಡುರಸ್ತೆಯಲ್ಲಿ ಹಲ್ಲೆ ಮಾಡಲು ಪ್ರಚೋದನೆ ನೀಡಿದವರನ್ನೂ ಸಹ ಬಂಧಿಸಬೇಕು ಎಂದು ಒತ್ತಾಯಿಸಿದರು.

ಸಭಾಪತಿಗಳ ಗಮನಕ್ಕೂ ತರದೆ ಏಕಾಏಕಿ ಸಿಟಿ ರವಿ ಅವರನ್ನು ಬಂಧಿಸಿದ್ದು ಅಕ್ಷಮ್ಯ ಅಪರಾಧ. ಅವರು ಗಾಯವಾಗಿದ್ದರೂ ಆಸ್ಪತ್ರೆಗೆ ಕರೆದುಕೊಂಡು ಹೋಗದೇ ರಾತ್ರಿಯೆಲ್ಲಾ 400-500 ಕಿ.ಮೀ ಸುತ್ತಾಡಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಗದಗ, ರಾಮದುರ್ಗ ಸೇರಿ ಎಲ್ಲಾ ಪೊಲೀಸ್ ಸ್ಟೇಷನ್ ಸುತ್ತಾಡಿಸಿ ದ್ವೇಷ ಹಾಗೂ ಕೀಳುಮಟ್ಟದ ರಾಜಕೀಯ ಮಾಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಕೊಳ್ಳಿ ಇಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕ ಸಂಜಯ್ ಪಾಟೀಲ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಸೇರಿದಂತೆ ಪದಾಧಿಕಾರಿಗಳು ಇದ್ದರು.

Exit mobile version