ಸಿಟಿ ರವಿ ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ: ಹೆಚ್‌ಡಿ ಕುಮಾರಸ್ವಾಮಿ| CT Ravi

ನವದೆಹಲಿ: ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿಟಿ ರವಿ (CT Ravi) ಅವರ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಕೇಂದ್ರ ಸಚಿವರು, ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಗೌರವಾನ್ವಿತ ಸಚಿವೆ ಬಗ್ಗೆ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು.

ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವ ಬಗ್ಗೆ ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕಾಂಗ್ರೆಸ್ ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು.

ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ.., ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ… ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್’ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ.

ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯಿಸಿದ್ದಾರೆ.

ಪೊಲೀಸರೇ.., ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿಟಿ ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ ಎಂದು ಅವರು ಗುಡುಗಿದ್ದಾರೆ.

ರಾಜಕೀಯ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಐವತ್ತು ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ Basavaraj Bommai

[ccc_my_favorite_select_button post_id="105001"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!