Harithalekhani

೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ನಗಾರಿ ಬಾರಿಸಿ ಸಮ್ಮೇಳನಾಧ್ಯಕ್ಷರಾದ ಮೆರವಣಿಗೆಗೆ ಚಾಲನೆ ನೀಡಿದ ಶ್ರೀಗಳು| Kannada sahitya sammelana

ಮಂಡ್ಯ: ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Kannada sahitya sammelana) ಸಮ್ಮೇಳನಾಧ್ಯಕ್ಷರಾದ ಡಾ.ಗೊ.ರು.ಚನ್ನಬಸಪ್ಪ ಅವರ ಮೆರವಣಿಗೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿರವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.

ಸಮ್ಮೇಳಾಧ್ಯಕ್ಷರಾದ ಡಾ.ಗೊ.ರು. ಚನ್ನಬಸಪ್ಪ ಅವರನ್ನು ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ಸಮ್ಮೇಳನ ನಡೆಯುವ ಸ್ಥಳಕ್ಕೆ ಕರೆದೊಯ್ಯಲಾಯಿತು.

ಮೈಸೂರು-ಬೆಂಗಳೂರು ಮುಖ್ಯ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಪ್ರಾರಂಭವಾದ ಮೆರವಣಿಗೆಯು ಸಮ್ಮೇಳನ ನಡೆಯುವ ವೇದಿಕೆವರೆಗೆ ಸಾಗಿತು.

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ, ಮೆರವಣಿಗೆ ಸಮಿತಿ ಅಧ್ಯಕ್ಷರೂ, ವಿಧಾನಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಶಾಸಕರಾದ ಪಿ. ರವಿಕುಮಾರ್ ಗೌಡ, ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಎನ್. ಮಹೇಶ್ ಜೋಶಿ.

ಜಿಲ್ಲಾಧಿಕಾರಿ ಡಾ.ಕುಮಾರ, ಸಿ.ಇ.ಓ. ಶೇಖ್ ತನ್ವೀರ್ ಆಸೀಫ್, ನಗರಸಭೆ ಅಧ್ಯಕ್ಷ ಪ್ರಕಾಶ್ ಎಂ. ವಿ. (ನಾಗೇಶ್), ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಮಂಡ್ಯ ಜಿಲ್ಲಾ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.

Exit mobile version