ಬೆಂಗಳೂರು ಗ್ರಾಮಾಂತರ ಜಿಲ್ಲೆ DC: ‘ಪ್ರಶಾಸನ್ ಗಾಂವ್ ಕಿ ಓರ್’ ಅಭಿಯಾನದ ಡಿ.19 ರಿಂದ 24 ರವರೆಗೆ ಉತ್ತಮ ಆಡಳಿತ ವಾರದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ ಹಾಜರಿದ್ದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಮಾಡಿ ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವರು.
ಇದರ ಅಂಗವಾಗಿ ಡಿಸೆಂಬರ್ 21ರ ಶನಿವಾರದಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಚೇರಿಗಳಲ್ಲಿ ಹಾಜರಿದ್ದು ವಿಶೇಷ ಆಂದೋಲನದ ರೀತಿಯಲ್ಲಿ ಸಾರ್ವಜನಿಕರಿಗೆ ಸೇವೆ ನೀಡುವರು.
ಸಾರ್ವಜನಿಕರು ಈ ವಿಶೇಷ ಆಂದೋಲನದಲ್ಲಿ ಭಾಗಿಯಾಗಿ ಕುಂದುಕೊರತೆಗಳ ಅಹವಾಲುಗಳನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.