ಸಿಟಿ ರವಿ ಬಂಧನ ಪ್ರಕರಣ; ಸಿಬಿಐ ತನಿಖೆಗೆ ಆರ್ ಅಶೋಕ ಆಗ್ರಹ| R Ashoka

ಬೆಂಗಳೂರು: ವಕ್ಫ್ ಮಂಡಳಿ ಹಿಂದೂಗಳು ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ. ಬಿಜೆಪಿಯ ಹೋರಾಟಕ್ಕೆ ಮಣಿದ ಸರ್ಕಾರ ಸಮಿತಿ ರಚನೆಗೆ ತೀರ್ಮಾನಿಸಿದೆ. ಜೊತೆಗೆ ಬಾಣಂತಿಯರ ಸಾವಿನ ಪ್ರಕರಣವನ್ನೂ ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಹತ್ತು ದಿನ ನಿಗದಿಯಾಗಿತ್ತು. ಆದರೆ ಕನ್ನಡ ಸಾಹಿತ್ಯ ಸಮ್ಮೇಳನ ಇದೆ ಎಂದು ಅದನ್ನು 9 ದಿನಕ್ಕೆ ಇಳಿಕೆ ಮಾಡಲಾಯಿತು. ಬಸವಣ್ಣನವರ ವರ್ಣಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಒಂದು ದಿನ ಕಳೆಯಿತು. ಉಳಿದಿದ್ದು ಏಳು ದಿನ ಮಾತ್ರ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನದಿಂದ ಎರಡು ದಿನ ಸದನ ನಡೆಯಲಿಲ್ಲ. ಉಳಿದಂತೆ ಬಿಜೆಪಿಗೆ ಚರ್ಚೆಗೆ ಕೇವಲ ಐದು ದಿನ ದೊರೆತಿದ್ದು, ವಕ್ಫ್‌ ಬೋರ್ಡ್, ಬಾಣಂತಿಯರ ಸಾವು, ಅನುದಾನ ತಾರತಮ್ಯ, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿ ಸರ್ಕಾರವನ್ನು ಕಟ್ಟಿ ಹಾಕುವ ಕೆಲಸ ಮಾಡಿದ್ದೇವೆ. ಇದಕ್ಕೆ ಸಹಕರಿಸಿದ ಎಲ್ಲ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಸದನದಲ್ಲಿ ಒಟ್ಟು ಎರಡು ಗಂಟೆಗಳ ಕಾಲ ನಾನು ವಕ್ಫ್ ಬೋರ್ಡ್ ವಿಚಾರವಾಗಿ ದಾಖಲೆ ಸಮೇತ ಮಾತನಾಡಿದ್ದೇನೆ. ಸರ್ಕಾರದ ಆದೇಶ, ಕೋರ್ಟ್ ಆದೇಶ, ಬ್ರಿಟಿಷರಿಂದ ಆರಂಭವಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾಲದವರೆಗೂ ಯಾವ ರೀತಿ ಮುಸ್ಲಿಮರನ್ನು ವೋಟ್ ಬ್ಯಾಂಕ್ ಆಗಿ ಹಂತ ಹಂತವಾಗಿ ಬಳಕೆ ಮಾಡಲಾಗಿದೆ ಎಂದು ವಿವರಿಸಿದ್ದೇನೆ ಎಂದರು.

ಮುಸ್ಲಿಮರ ಆಸ್ತಿ ಕಬಳಿಕೆ ತಡೆಯಲು ಬ್ರಿಟಿಷರು ವಕ್ಫ್ ಬೋರ್ಡ್ ಸ್ಥಾಪಿಸಿದರು. ಆದರೆ ಕಾಂಗ್ರೆಸ್‌ನವರು ಮುಸ್ಲಿಮರಿಗೆ ಅನುಕೂಲವಾಗುವ ಕಾಯಿದೆ ತಂದರು. ಮುಸ್ಲಿಮರಿಗೆ ಹಿಂದೂಗಳಿಗಿಂತ ಎತ್ತರದ ಸ್ಥಾನ ನೀಡಿದರು. ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ವಕ್ಫ್ ಬೋರ್ಡ್‌ಗೆ ವಿಶೇಷ ಅಧಿಕಾರಗಳನ್ನು ಕೊಟ್ಟರು. ಮನಮೋಹನ್ ಸಿಂಗ್ ಅವರಂತೂ ಒನ್ಸ್ ವಕ್ಫ್ ಬೋರ್ಡ್ ಅಲ್ ವೇಸ್ ವಕ್ಫ್ ಬೋರ್ಡ್‌ ಎಂಬ ಕಾನೂನು ತಂದರು. ಇವರು ಈ ಕಾನೂನು ಮಾಡಿದ ಬಳಿಕ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಆಸ್ತಿ ವಕ್ಫ್ ಬೋರ್ಡ್‌ ಸೇರಿತು ಎಂದು ದೂರಿದರು.

ತಾರ್ಕಿಕ ಅಂತ್ಯ

ಕರ್ನಾಟಕದಲ್ಲಿ ವಕ್ಫ್ ವೆಬ್‌ಸೈಟ್‌ನಲ್ಲಿ 1.11 ಲಕ್ಷಕ್ಕೂ ಹೆಚ್ಚು ಎಕರೆ ಜಮೀನು ಸ್ವಾಧೀನದಲ್ಲಿದೆ ಎಂದಿದೆ. ಅದರಲ್ಲಿ 86 ಸಾವಿರ ಎಕರೆ ವಿವಾದದಲ್ಲಿದೆ. ಚಿಕ್ಕಬಳ್ಳಾಪುರದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಓದಿದ ಶಾಲೆಯನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ಘೋಷಿಸಿ ಅಲ್ಲಿ ಮಸೀದಿ ಕಟ್ಟಿದ್ದಾರೆ. ರಾಷ್ಟ್ರಧ್ವಜ ಹಾರಿಸಬೇಕಾದ ಜಾಗದಲ್ಲಿ ಹಸಿರು ಧ್ವಜ ಹಾರಿಸುತ್ತಿದ್ದಾರೆ.

ಬೀದರ್‌ನಲ್ಲಿ 560 ಎಕರೆ ಇರುವ ಹಳ್ಳಿಯನ್ನು ವಕ್ಫ್ ಬೋರ್ಡ್ ಆಸ್ತಿ ಮಾಡಿಬಿಟ್ಟಿದ್ದಾರೆ. ಇಷ್ಟೆಲ್ಲ ವಿಚಾರಗಳನ್ನು ಮಂಡಿಸಿದ ಬಳಿಕ ನಮ್ಮ ಹೋರಾಟಕ್ಕೆ ಮಣಿದ ಸರ್ಕಾರ, ನಿವೃತ್ತ ಜಡ್ಜ್ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ ಎಂದು ಭರವಸೆ ನೀಡಿದೆ. ಇದು ಬಿಜೆಪಿಯ ಹೋರಾಟಕ್ಕೆ ಸಂದ ಜಯ. ಈಗ ಸರ್ಕಾರ ನ್ಯಾಯಾಂಗ ತನಿಖೆಗೆ ನಿರ್ಧರಿಸಿದೆ. ಯಾವೆಲ್ಲಾ ರೈತರಿಗೆ ಅನ್ಯಾಯ ಆಗಿದೆ ಅವರು ಈಗ ಮನವಿ ಸಲ್ಲಿಸಬಹುದು. ಈ ಮೂಲಕ ವಕ್ಫ್ ಬೋರ್ಡ್ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿದ್ದೇವೆ ಎಂದು ತಿಳಿಸಿದರು.

ಬಾಣಂತಿಯರು ಹಾಗೂ ನವಜಾತ ಶಿಶುಗಳ ಸಾವಿಗೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಬಹಳಷ್ಟು ಚರ್ಚೆ ಮಾಡಿದ್ದೇವೆ. ಅವಧಿ ಮುಗಿದ ಔಷಧಿ ಬಗ್ಗೆಯೂ ದಾಖಲೆ ಕೊಟ್ಟಿದ್ದೇನೆ. ಆರೋಗ್ಯ ಸಚಿವರ ರಾಜೀನಾಮೆಗೂ ಸದನದಲ್ಲಿ ಆಗ್ರಹಿಸಿದ್ದೇವೆ. ಇದನ್ನು ನ್ಯಾಯಾಂಗ ತನಿಖೆಗೆ ವಹಿಸಲು ಸರ್ಕಾರ ಒಪ್ಪಿದೆ. ಇದು ಕೂಡ ವಿಧಾನಸಭೆಯ ಒಳಗೆ ಬಿಜೆಪಿಯ ಹೋರಾಟಕ್ಕೆ ಸಿಕ್ಕ ಜಯ ಎಂದು ತಿಳಿಸಿದರು.

ಉತ್ತರ ಕರ್ನಾಟಕಕ್ಕೆ ಅನುದಾನವಿಲ್ಲ

ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಬಿಜೆಪಿಯ 30 ಕ್ಕೂ ಹೆಚ್ಚು ಶಾಸಕರು ಮಾತನಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂತೆ ಭಾಷಣ ಮಾಡುವುದನ್ನು ಬಿಡಬೇಕು. ಕಳೆದ ಅಧಿವೇಶನದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಮಾತನಾಡಿ ಉತ್ತರ ಕರ್ನಾಟಕಕ್ಕೆ ನಾನು ಏನೇನು ಕೊಡುತ್ತೇನೆ ಎಂದು ಘೋಷಿಸಿದ್ದರು.

ಬೀದರ್, ಧಾರವಾಡ, ವಿಜಯಪುರ, ಕಲ್ಬುರ್ಗಿ ಹೀಗೆ ಎಲ್ಲಾ ಜಿಲ್ಲೆಗೆ ಒಂದೊಂದು ಕೈಗಾರಿಕೆಯನ್ನು ತರುತ್ತೇನೆ ಎಂದಿದ್ದರು. ನಂಜುಡಪ್ಪ ವರದಿಯಂತೆ ಸಮಿತಿ ನೇಮಕ ಮಾಡುತ್ತೇನೆ, ಆರು ತಿಂಗಳಲ್ಲಿ ವರದಿ ನೀಡುತ್ತೇನೆ ಎಂದಿದ್ದರು. ಆದರೆ ವರ್ಷ ಕಳೆದರೂ ಇನ್ನೂ ವರದಿ ಬರಲಿಲ್ಲ. ಪ್ರವಾಸೋದ್ಯಮಕ್ಕೆ ಹಣ ಕೊಡುತ್ತೇನೆ ಎಂದು ಹೇಳಿ ಅದನ್ನೂ ಮಾಡಲಿಲ್ಲ. ಕಳೆದ ಬಾರಿ ಹೇಳಿದ್ದನ್ನೇ ಮಾಡದ ಮುಖ್ಯಮಂತ್ರಿ, ಈಗ ಮತ್ತೆ ಘೋಷಣೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಪೀಕರ್ ಯು.ಟಿ.ಖಾದರ್‌ ಅವರು ಅಧಿವೇಶನವನ್ನು ಇನ್ನಷ್ಟು ಚೆನ್ನಾಗಿ ನಡೆಸಬಹುದಿತ್ತು. ಅವರಿನ್ನೂ ಕಾಂಗ್ರೆಸ್ ಮನಸ್ಥಿತಿಯಲ್ಲೇ ಇದ್ದಾರೆ. ಸ್ಪೀಕರ್‌ ಯಾವುದೇ ಪಕ್ಷಕ್ಕೆ ಸೀಮಿತವಾಗಬಾರದು. ಅವರು ಆಡಳಿತ ಪಕ್ಷದ ಕಡೆ ನೋಡುವ ಬದಲಾಗಿ, ವಿಪಕ್ಷಕ್ಕೆ ಹೆಚ್ಚಿನ ಅವಕಾಶ ಕೊಟ್ಟರೆ ಜನರಿಗೆ ನ್ಯಾಯ ಕೊಡಿಸಬಹುದು. ಇನ್ನು ಮುಂದೆಯಾದರೂ ಸ್ಪೀಕರ್ ಆಡಳಿತ ಪಕ್ಷದ ಕಡೆಗೆ ನೋಡುವುದನ್ನು ಬಿಟ್ಟು ವಿರೋಧ ಪಕ್ಷದ ಕಡೆಗೆ ನೋಡಬೇಕು ಎಂದು ಸಲಹೆ ನೀಡಿದರು.

ಸಿಬಿಐ ತನಿಖೆಗೆ ವಹಿಸಿ

ಶಾಸಕ ಸಿ.ಟಿ.ರವಿ ಅವರನ್ನು ಪೊಲೀಸರು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋದರು. ಸೇಫ್ಟಿ ದೃಷ್ಟಿಯಿಂದ ಕೆಲವರು ಕಾಡು, ಕ್ವಾರಿಗಳಲ್ಲಿ ಅಡಗಿ ಕುಳಿತುಕೊಳ್ಳುತ್ತಾರೆ. ಪೊಲೀಸರು ಹೊಸ ಸೇಫ್ಟಿ ಮಾರ್ಗ ಹುಡುಕಿದ್ದಾರೆ. ಮುಖ್ಯಮಂತ್ರಿ ಹಾಗೂ ಸಚಿವರನ್ನು ಸುರಕ್ಷತೆ ದೃಷ್ಟಿಯಿಂದ ಕಬ್ಬಿನ ಗದ್ದೆಗೆ ಅಥವಾ ಕ್ವಾರಿಗೆ ಕರೆದುಕೊಂಡು ಹೋಗಿ ಬಿಡುವುದು ಉತ್ತಮ ಎಂದು ವ್ಯಂಗ್ಯವಾಡಿದರು.

ಒಬ್ಬ ವಿಧಾನಪರಿಷತ್ ಸದಸ್ಯನಿಗೆ ಸುರಕ್ಷತೆ ಕೊಡಲು ಸಾಧ್ಯವಾಗದ ಸರ್ಕಾರ, ಅಪರಾಧಿಗಳಿಂದ ಜನರನ್ನು ಹೇಗೆ ಕಾಪಾಡುತ್ತದೆ? ಸಿ.ಟಿ.ರವಿ ನಕ್ಸಲ್ ಪ್ರದೇಶದಿಂದ ಬಂದವರು. ಅವರಿಗೆ ಮೊದಲೇ ನಕ್ಸಲರಿಂದ ಪ್ರಾಣ ಬೆದರಿಕೆ ಇದ್ದು, ಅಂತಹವರನ್ನು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿದ್ದಾರೆ. ಅವರಿಗೆ ನಕ್ಸಲರು ಗುಂಡು ಹೊಡೆಯಲಿ ಎಂಬ ಕಾರಣಕ್ಕೆ ಅಲ್ಲಿಗೆ ಕರೆದುಕೊಂಡು ಹೋದರೇ? ಈ ಪ್ರಕರಣವನ್ನು ಸದನದ ಒಳಗೆ ಬಗೆಹರಿಸಬೇಕಿತ್ತು. ಅದನ್ನು ಬಿಟ್ಟು ಎಲ್ಲೋ ಪ್ರಕರಣ ದಾಖಲಿಸಿ ರಾತ್ರಿಯೆಲ್ಲಾ ಬಸ್‌ನಲ್ಲಿ ಸುತ್ತಾಡಿಸಲಾಗಿದೆ.

ಹೀಗೆ ಬಂಧಿಸಿದ ಪೊಲೀಸ್‌ ಅಧಿಕಾರಿ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ. ಬಂಧನ ಬಳಿಕ ಪೊಲೀಸ್‌ ಅಧಿಕಾರಿಗಳು ಫೋನ್‌ನಲ್ಲಿ ನಿರಂತರವಾಗಿ ಮಾತನಾಡುತ್ತಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು.

ರಾಜಕೀಯ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದಲ್ಲಿ 50% ಭ್ರಷ್ಟಾಚಾರ; ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಇಲಾಖೆಗಳಲ್ಲಿಯೂ ಐವತ್ತು ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಂಸದ Basavaraj Bommai

[ccc_my_favorite_select_button post_id="105001"]
ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಮೈ ಫ್ರೆಂಡ್ ಮೋದಿ ಎನ್ನುತ್ತಲೇ ಭಾರತಕ್ಕೆ ಬರೆ ಎಳೆದ ಟ್ರಂಪ್

ಇಷ್ಟು ದಿನ ಬಾಯಿ ಮಾತಲ್ಲೇ ಸುಂಕ ಸಂಘರ್ಷದ ಮಾತುಗಳನ್ನು ಆಡುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಂಗಳವಾರ ಮಧ್ಯರಾತ್ರಿ 2.20 (ಭಾರತೀಯ ಕಾಲಮಾನ) trump

[ccc_my_favorite_select_button post_id="104924"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

Doddaballapura: ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಳವು..! Video

ದೇವಾಲಯದ ಬಾಗಿಲು ಮೀಟಿ ಒಳಬಂದಿರುವ ಅಪರಿಚಿತ ದುಷ್ಕರ್ಮಿ, ಹುಂಡಿಯನ್ನು ಹೊಡೆದು ಕಳ್ಳವು ನಡೆಸಿದ್ದಾನೆ ಎನ್ನಲಾಗಿದೆ. Doddaballapura

[ccc_my_favorite_select_button post_id="104979"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!