ನೆಲಮಂಗಲ accident: ಚೆಲಿಸುತ್ತಿದ್ದ ಕಾರಿನ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಕಂಟೇನರ್ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ದಾರುಣ ಅಂತ್ಯಕಂಡಿರುವ ಘಟನೆ ನೆಲಮಂಗಲ ತಾಲೂಕಿನ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ.
ಏಕಾಏಕಿ ಲಾರಿ ಕಾರಿನ ಮೇಲೆ ಬಿದ್ದಿದ್ದರಿಂದ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗಿದ್ದ ಎರಡು ಮಕ್ಕಳು ಸೇರಿ 4 ಮಂದಿ ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 4 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.
ಈ ಭೀಕರ ಅಪಘಾತದ ಹಿನ್ನೆಲೆಯಲ್ಲಿ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಸುಮಾರು 1 ಕಿಲೋ ಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಸೇರಿದಂತೆ ಇತರೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ನೆರವಿನಿಂದ ಹರಸಾಹಸಪಟ್ಟು ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಇದೀಗ ಬಂದ ಮಾಹಿತಿ ಅನ್ವಯ ಮೃತರ ಸಂಖ್ಯೆ 6 ಕ್ಕೆ ಏರಿಕೆಯಾಗಿದ್ದು, ಚಂದ್ರಮ್ ಯೋಗಪ್ಪ ಗೊಳ್ (48 ವರ್ಷ), ಗೌರಾ ಬಾಯಿ (42 ವರ್ಷ), ದೀಕ್ಷಾ (12 ವರ್ಷ), ಗ್ಯಾನ್ (16 ವರ್ಷ), ವಿಜಯಲಕ್ಷ್ಮಿ (36 ವರ್ಷ ) ಆರ್ಯ (6 ವರ್ಷ).ಈ 6 ಜನರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ಅಲ್ಲದೆ ಟಾಟಾ ಕ್ಯಾಂಟರ್ ಮತ್ತು ಕಂಟೈನರ್ ವಾಹನದಲ್ಲಿದ್ದ ಚಾಲಕರಿಗೆ ಏಟು ಬಿದ್ದು ಗಾಯಗಳಾಗಿದೆ.