Site icon Harithalekhani

ಅಂಬೇಡ್ಕರ್ ಕುರಿತು ಅಮಿತ್ ಶಾ ಲಘು ಹೇಳಿಕೆ ಆರೋಪ; ನಾಳೆ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ| ambedkar

ದೊಡ್ಡಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ (ambedkar) ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಲಘು ಹೇಳಿಕೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ತೀವ್ರತರವಾದ ಪ್ರತಿಭಟನೆಗಳು ನಡೆಯುತ್ತವೆ.

ಅಂತೆಯೇ ನಾಳೆ (ಡಿ.23) ಅಂಬೇಡ್ಕರ್ ಕುರಿತು ಲಘುವಾಗಿ ಮಾತನಾಡಿರುವ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ, ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಬೆಳಿಗ್ಗೆ 11.30 ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಸೇರಿದಂತೆ ಕೆಪಿಸಿಸಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳು, ನಗರಸಭೆ ಸದಸ್ಯರು, ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಮಖಂಡರು,ಹಾಗೂ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆಂದು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜವಾಜಿ ರಾಜೇಶ್ ತಿಳಿಸಿದ್ದಾರೆ.

Exit mobile version