Site icon Harithalekhani

ಸಿಟಿ ರವಿ ವಿರುದ್ಧ ಲಿಂಗಾಯತ ಮಹಾಸಭೆ ಕಿಡಿ.. ಮಹಿಳೆಯರ ಕ್ಷಮೆ ಯಾಚಿಸಲು ಆಗ್ರಹ| CT Ravi

City Ravi prayed for Lakshmi Hebbalkar's speedy recovery

City Ravi prayed for Lakshmi Hebbalkar's speedy recovery

ದಾವಣಗೆರೆ: ಬೆಳಗಾವಿ ವಿಧಾನ ಪರಿಷತ್ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸದಸ್ಯ ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಕುರಿತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರತಿಕ್ರಿಯಿಸಿದ್ದು, ಸಿಟಿ ರವಿ (CT Ravi) ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.

ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ, ಸಿಟಿ ರವಿ ಅವರು ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಆಡಿದ ಆಕ್ಷೇಪಾರ್ಹ ಮಾತು ವಿಧಾನಸಭೆ ಹಾಗೂ ವಿಧಾನ ಪರಿಷತ್ ಗೆ ಮಾಡಿದ ಕಪ್ಪುಚುಕ್ಕೆ ಎಂದಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಪರಿಷತ್ ಕಲಾಪದಲ್ಲಿ ಸಿಟಿ ರವಿ ಅವರು ಮಹಿಳೆಯ ಬಗ್ಗೆ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಬೇಸರ ತಂದಿದೆ. ದೇಶದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು ಗೌರವ ನೀಡಲಾಗಿದೆ. ಆಡಿರುವ ಮಾತು ಗಮನಿಸಿದರೆ ನಾಲಿಗೆ ನಾಗರಿಕತೆ ಹೇಳುತ್ತದೆ.

ಜನಪ್ರತಿನಿಧಿಗಳು ಸದನದ ಗೌರವ, ಘನತೆ ಕಾಪಾಡಬೇಕು. ಸದನದ ಒಳಗೆ ಮತ್ತು ಹೊರಗೆ ಜನಪ್ರತಿನಿಧಿಗಳ ನಡವಳಿಕೆಗಳು ಇತರರಿಗೆ ಮಾದರಿಯಾಗಬೇಕು. ಅಸಾವಿಧಾನಿಕ ಪದ ಬಳಕೆ ಮಾಡಿರುವುದು ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆ.

ಸಿಟಿ ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವುದನ್ನು ಮಹಾಸಭಾ ತೀವ್ರವಾಗಿ ಖಂಡಿಸುತ್ತದೆ. ಈ ಮಾತು ಒಪ್ಪಲು ಸಾಧ್ಯವಿಲ್ಲ. ಕೂಡಲೇ ಸಿಟಿ ರವಿ ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

Exit mobile version