Site icon Harithalekhani

ರೂ.1.08 ಕೋಟಿ ವೆಚ್ಚದಲ್ಲಿ ದೊಡ್ಡಬಳ್ಳಾಪುರ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ| KH Muniyappa

ದೊಡ್ಡಬಳ್ಳಾಪುರ: ತಾಲ್ಲೂಕು ಪಂಚಾಯಿತಿ ಆವರಣದಲ್ಲಿಂದು ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 108.50 ಲಕ್ಷ ರೂಗಳ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ (KH Muniyappa) ಅವರು ಶಂಕುಸ್ಥಾಪನೆ ನೆರವೇರಿಸಿದರು.

ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಜಿಪಂ ಸಿಇಒ ಡಾ. ಕೆ ಎನ್ ಅನುರಾಧ, ತಹಶೀಲ್ದಾರ ವಿಭಾ ವಿದ್ಯಾ ರಾಥೋಡ್, ಪೌರಾಯುಕ್ತ ಕಾರ್ತಿಕ್ ಈಶ್ವರ್, ತಾಪಂ ಇಒ ಮುನಿರಾಜು, ನಗರಸಭಾ ಸದಸ್ಯರು, ನಗರಸಭೆ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

Exit mobile version