ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (Kannada Sahitya sammelana) ನಡೆಯುತ್ತಿದ್ದು, ಶನಿವಾರ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಜೆ ಕಾರ್ಯಕ್ರಮ ನಡೆಸಿಕೊಟ್ಟರು.
ಸಾಹಿತ್ಯ ಹಾಗೂ ಸಂಗೀತದ ಜುಗಲ್ ಬಂಧಿಗೆ ಸಾಕ್ಷಿಯಾದ ಈ ಸಂಗೀತ ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದರು.
ವೇದಿಕೆಯಲ್ಲಿ ಅಧ್ಯಕ್ಷ ಅಧ್ಯಕ್ಷ ಹಾಡಿಗೆ ಸಚಿವ ಚಲುವರಾಯಸ್ವಾಮಿ ಜೊತೆ, ಶಾಸಕರಾದ ನರೇಂದ್ರ ಸ್ವಾಮಿ, ಗಣಿಗ ರವಿ ಕುಣಿದು ಕುಪ್ಪಳಿಸಿದರು.
ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಸೇರಿದ್ದರು. ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು ಕಂಡ ಸಂಭ್ರಮ ಸಚಿವ ಚಲುವರಾಯಸ್ವಾಮಿ ಮುಖದಲ್ಲಿ ಕಂಡುಬಂತು.