HD Kumaraswamy| ಜೆಡಿಎಸ್ – ಬಿಜೆಪಿ ಮೈತ್ರಿ ಸರಕಾರ ಬಂದೇ ಬರುತ್ತದೆ; ನಮ್ಮ Unfinished ಅಜೆಂಡಾ ಪೂರ್ಣಗೊಳಿಸುತ್ತೇವೆ: ಹೆಚ್‌.ಡಿ.ಕುಮಾರಸ್ವಾಮಿ

ಸಕಲೇಶಪುರ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.

ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರಕಾರ ರಚನೆಯಾದಾಗ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಅನೇಕ ಜನಪರ ಕಾರ್ಯಕ್ರಮಗಳ ಜಾರಿ ಬಾಕಿ ಉಳಿದಿದೆ. ಅವೆಲ್ಲವನ್ನೂ ಅನುಷ್ಠಾನಕ್ಕೆ ತರಬೇಕಾದರೆ ಮತ್ತೊಮ್ಮೆ ಮೈತ್ರಿ ಸರಕಾರ ಬರಬೇಕಿದೆ. ಶೀಘ್ರದಲ್ಲಿಯೇ ಬಂದೇ ಬರುತ್ತದೆ ಎಂದು ಹೇಳಿದರು.

ಮುಂದೆ ನಿಮ್ಮೆಲ್ಲರ ಆಶೀರ್ವಾದದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಬರುವ ಆಶಯವಿದೆ. ನನ್ನ ಕನಸಿನ ಕೆಲವು ಶಾಶ್ವತ ಯೋಜನೆಗಳು ಹಾಗೆಯೇ ಉಳಿದಿವೆ. ಅವುಗಳನ್ನೆಲ್ಲಾ ಸಾಕಾರಗೊಳಿಸಬೇಕಿದೆ. ರೈತರ ಬದುಕನ್ನು ಕಟ್ಟಿಕೊಡುತ್ತೇವೆ ಎಂದು ಕೇಂದ್ರ ಸಚಿವರು ನುಡಿದರು.

ಕಾಫಿ ಬೆಳೆಗಾರರಿಗೆ ಸಚಿವರ ಅಭಯ

ಪ್ರಾಕೃತಿಕ ಕಾರಣ ಹಾಗೂ ಪ್ರತಿಕೂಲಕರ ಹವಾಮಾನದಿಂದ ಕಾಫಿ ಬೆಳೆಗಾರರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜಾಗತಿಕ ಮಾರುಕಟ್ಟೆ ತಲ್ಲಣಗಳಿಂದ ಬೆಳೆಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. 1991ರಲ್ಲಿ ದೇವೇಗೌಡರು ಸಂಸದರಾಗಿದ್ದರು.

ಸಕಲೇಶಪುರದಲ್ಲಿ ನಡೆದ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಐ.ಕೆ.ಗುಜ್ರಾಲ್ ಅವರು ಭಾಗವಹಿಸಿದ್ದರು. ಅಂದು ಗುಜ್ರಾಲ್ ಅವರಿಗೆ ದೇವೇಗೌಡರು ಕಾಫಿ ಬೆಳೆಗಾರರ ಸಮಸ್ಯೆ ವಿವರಿಸಿದ್ದರು. ಅವರನ್ನು ಬಿಟ್ಟರೆ ನಲವತ್ತು ವರ್ಷಗಳ ನಂತರ ಸಕಲೇಶಪುರಕ್ಕೆ ಬಂದಿರುವ ಕೇಂದ್ರ ಸಚಿವರು ಅಂದರೆ ಫಿಯುಷ್ ಗೋಯೆಲ್ ಅವರು ಮಾತ್ರ. ಅದಕ್ಕಾಗಿ ನಾನು ಗೋಯಲ್ ಅವರಿಗೆ ಆಭಾರಿ ಆಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪಿಯೂಷ್ ಗೋಯಲ್ ಅವರು ಸಕಲೇಶಪುರಕ್ಕೆ ಬಂದಿರುವ ಕಾರಣಕ್ಕೆ ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಕೇಂದ್ರ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಸಕಲೇಶಪುರ ಜನರು ಆನೆ ಹಾವಳಿಗೆ ತುತ್ತಾಗಿ ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ನಾನೂ ಮನವಿ ಮಾಡಿದ್ದೇನೆ. ಕೇಂದ್ರದಲ್ಲಿ ಪರಿಸರ ಇಲಾಖೆ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅವರ ಗಮನಕ್ಕೆ ಮತ್ತೊಮ್ಮೆ ಈ ವಿಷಯ ತರುತ್ತೇನೆ. ಪಿಯೂಷ್ ಗೋಯಲ್ ಮತ್ತು ನಾನು ಭೇಟಿ ಮಾಡಿ ಮನವಿ ಮಾಡುತ್ತೇವೆ. ಆನೆ ಕಾರಿಡಾರ್ ನಿರ್ಮಾಣ ಮಾಡಲು ಅರಣ್ಯ ಇಲಾಖೆ ಹದಿನೈದು ಸಾವಿರ ಎಕರೆ ಗುರುತಿಸಿದೆ. ರೈತರು ಮೂರು ಸಾವಿರ ಎಕರೆ ಬಿಟ್ಟುಕೊಡಲು ಸಿದ್ದರಿದ್ದಾರೆ. ಆದರೆ ಆ ಯೋಜನೆ ನೆನೆಗುದಿಗೆ ಬಿದ್ದಿದೆ. ನಾನು ಮುಖ್ಯಮಂತ್ರಿಯಾದಾಗ ತಡೆಗೋಡೆ ನಿರ್ಮಾಣ ಮಾಡಲು ನೂರು ಕೋಟಿ ಬಿಡುಗಡೆ ಮಾಡಿದ್ದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ಕಸ್ತೂರಿ ರಂಗನ್ ವರದಿ ಬಗ್ಗೆ ಎಲ್ಲರಲ್ಲೂ ಆತಂಕ ಇದೆ. ಹೇಮಾವತಿ ನದಿಯ ನೀರು ಮಲೆನಾಡು ಭಾಗದ ಜನರ ತ್ಯಾಗದ ಫಲ. ಎತ್ತಿನಹೊಳೆ ಯೋಜನೆ ಹೆಸರಿನಲ್ಲಿ ರಸ್ತೆ ಅಭಿವೃದ್ಧಿ ಮಾಡಲು ಅನುಕೂಲವಾಗಿದೆ ಎಂದು ಅವರು ಹೇಳಿದರು.

ದೇವೇಗೌಡರ ಮೇಲೆ ಅಪಾರ ಗೌರವ ಇಟ್ಟಿರುವ ನರೇಂದ್ರಮೋದಿ ಅವರು ತಮ್ಮ ಸಂಪುಟದಲ್ಲಿ ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ಕನಸಿನ ವಿಕಸಿತ ಭಾರತ್ ಸೇರಿದಂತೆ ಅನೇಕ ಯೋಜನೆಗಳನ್ನು ಸಾಕಾರಗೊಳಿಸಬೇಕು. ಆ ನಿಟ್ಟಿನಲ್ಲಿ ನಾವು ವೇಗವಾಗಿ ಕೆಲಸ ಮಾಡುತ್ತಿದ್ದೇವೆ ಎಂದರು ಸಚಿವರು.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರು ಕಾಫಿ ಬೆಳೆಗಾರರನ್ನು ಉದ್ದೇಶಿಸಿ ಮಾತನಾಡಿದರು.

ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಮೋಟಮ್ಮ, ಕರ್ನಾಟಕ ಗ್ರೋವರ್ಸ್ ಫೆಡರೇಶನ್ ಅಧ್ಯಕ್ಷ ಡಾ.ಹೆಚ್.ಟಿ. ಮೋಹನ್ ಕುಮಾರ್, ಸಂಸದರಾದ ತೇಜಸ್ವಿ ಸೂರ್ಯ, ಶ್ರೇಯಸ್ ಪಟೇಲ್, ಶಾಸಕರಾದ ಎಸ್.ಮಂಜುನಾಥ್, ಹೆಚ್.ಕೆ. ಸುರೇಶ್, ಮಂಥರ್ ಗೌಡ, ಸ್ವರೂಪ್ ಪ್ರಕಾಶ್, ಕಾಫಿ ಮಂಡಳಿ ಅಧ್ಯಕ್ಷ ಡಿ.ಜೆ.ದಿನೇಶ್ ಸೇರಿದಂತೆ ಅನೇಕ ಗಣ್ಯರು, ಕಾಫಿ ಬೆಳೆಗಾರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ದೊಡ್ಡಬೆಳವಂಗಲ VSSN: ಕಾಂಗ್ರೆಸ್‌ಗೆ ಅಧ್ಯಕ್ಷ, ಬಿಜೆಪಿಗೆ ಉಪಾಧ್ಯಕ್ಷ..!

ದೊಡ್ಡಬೆಳವಂಗಲ VSSN: ಕಾಂಗ್ರೆಸ್‌ಗೆ ಅಧ್ಯಕ್ಷ, ಬಿಜೆಪಿಗೆ ಉಪಾಧ್ಯಕ್ಷ..!

ದೊಡ್ಡಬೆಳವಂಗಲ ವ್ಯವಸಾಯ ಸೇವಾ ಸಹಕಾರ ಸಂಘದ (VSSN) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗಿದೆ.

[ccc_my_favorite_select_button post_id="102385"]
ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ಸಿದ್ದು, ಬಿಎಸ್‌ವೈಗೆ ನಿರ್ಣಾಯಕ ದಿನ..!

ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಆದೇಶವನ್ನು ಕಾಯ್ದಿರಿಸಿದ್ದು ಶುಕ್ರವಾರ ಈ ಎರಡೂ ಅರ್ಜಿಗಳ ಆದೇಶ ಹೊರಬೀಳಲಿದೆ. Cmsiddaramaiah

[ccc_my_favorite_select_button post_id="102376"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಪೊಲೀಸರು ಸಾಥ್ ನೀಡಿದ್ದಾರೆ. ಪತ್ತೆಯಾದ ರಕ್ತಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿದ್ದಾರೆ. (Hosakote)

[ccc_my_favorite_select_button post_id="102381"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!