ಚಿಕ್ಕಮಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಿಐಡಿ (CID) ತನಿಖೆಗೆ ನೀಡಿದೆ. ಈ ಕುರಿತು ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿಐಡಿ ತನಿಖೆಯಿಂದ ನಮಗೆ ನ್ಯಾಯ ಸಿಗಲ್ಲ, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಸಿಟಿ ರವಿಗೆ ಸಂಕಷ್ಟ.. CID ತನಿಖೆಗೆ ಅಶ್ಲೀಲ ಪದ ಬಳಕೆ ಪ್ರಕರಣ..!: ಜೋಶಿಗೆ ಪರಂ ತಿರುಗೇಟು
ಒತ್ತಡವಿಲ್ಲದೇ ಕೆಲಸ ಮಾಡಿದರೆ ರಕ್ಷಣೆ ಸಿಗಬಹುದು. ಅದನ್ನು ಸಿಐಡಿ ಅಲ್ಲ, ಓರ್ವ ಕಾನ್ಸ್ ಟೇಬಲ್ ಕೂಡ ಮಾಡಬಹುದಾಗಿದೆ. ಆದರೆ ಒತ್ತಡವಿದ್ದಾಗ ಸಿಐಡಿಯಿಂದ ನ್ಯಾಯ ಸಿಗುವ ಸಾಧ್ಯತೆ ಇಲ್ಲ.
ಇದನ್ನೂ ಓದಿ: ಅಂದಿಲ್ಲ ಅನ್ನೋದಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ: CT Raviಗೆ ಲಕ್ಷ್ಮೀ ಹೆಬ್ಬಾಳಕರ್ ಸವಾಲ್
ನ್ಯಾಯ ಸಮ್ಮತವಾಗಿದ್ದರೆ ಸಿಐಡಿಗೆ ನೀಡಬೇಕಿರುವ ಅಗತ್ಯವಿಲ್ಲ ಪ್ರಕರಣ ಕುರಿತು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಸಿಟಿ ರವಿ ಆಗ್ರಹಿಸಿದರು.