ದೊಡ್ಡಬಳ್ಳಾಪುರ: ಕನ್ನಮಂಗಲ ಗೇಟ್ ಬಳಿ ಸೋಮವಾರ ಸಂಜೆ ದೇವಸ್ಥಾನಕ್ಕೆ ತೆರಳುತ್ತಿದ್ದ ದಂಪತಿಯ ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ (Accident news update) ಹೊಡೆದು ದಂಪತಿ ಮೃತಪಟ್ಟಿದ್ದಾರೆ.
ಮೃತರನ್ನು ರಾಮದೇವನಹಳ್ಳಿ ನಿವಾಸಿಗಳಾದ ಅನ್ನದಾನಯ್ಯ (65 ವರ್ಷ), ನಾಗರತ್ನಮ್ಮ (58 ವರ್ಷ)
ಮೃತರು ರಾಮದೇವನಹಳ್ಳಿಯಿಂದ ಟಿವಿಎಸ್ ಎಕ್ಸೆಲ್‌ನಲ್ಲಿ ಚಿಕ್ಕ ಮಧುರೆ ಶನಿ ಮಹಾತ್ಮ ಸ್ವಾಮಿ ದೇಗುಲಕ್ಕೆ ತೆರಳುವ ವೇಳೆ, ಕನ್ನಮಂಗಲ ಗೇಟ್ ಬಳಿ ಇರುವ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಮುಖ್ಯ ರಸ್ತೆ್ಗೆ ಬರುವಾಗ ದೊಡ್ಡಬಳ್ಳಾಪುರ ಕಡೆಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿಸಿತು. ಚಿಕಿತ್ಸೆಗೆ ಸ್ಪಂದಿಸದೆ ದಂಪತಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅಪರ ಪೊಲೀಸ್ ವರಿಷ್ಠಾಧಿಕಾರಿ ಮಾಗೇಶ್ ಕುಮಾರ್, ಡಿವೈಎಸ್ಪಿ ರವಿ, ಇನ್ಸ್ಪೆಕ್ಟರ್ ಕಲ್ಲಪ್ಪ ಎಸ್ ಕರಾತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.