ಸಿಟಿ ರವಿಗೆ ಸಂಕಷ್ಟ.. CID ತನಿಖೆಗೆ ಅಶ್ಲೀಲ ಪದ ಬಳಕೆ ಪ್ರಕರಣ..!: ಜೋಶಿಗೆ ಪರಂ ತಿರುಗೇಟು

ಹುಬ್ಬಳ್ಳಿ: ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನ ಪರಿಷತ್ ಕಲಾಪದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಕುರಿತು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಳಸಿದ ಅಶ್ಲೀಲ ಪದ ಬಳಕೆ ವಿಚಾರವನ್ನು ಸಿಐಡಿ (CID) ತನಿಖೆಗೆ ಆದೇಶಿಸಿರುವುದಾಗಿ ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.

ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ, ಹೆಬ್ಬಾಳ್ಳರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಈ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ.

ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು, ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು, ಆದರೆ ಸತ್ಯ ಏನೆಂದು ತಿಳಿದು ಬರುತ್ತದೆ ಎಂದು ಜಿ ಪರಮೇಶ್ವರ್​ ಹೇಳಿದರು.

ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ. ಸಿಎಂ ಅಥವಾ ಗೃಹ ಸಚಿವರ ಆದೇಶವನ್ನು ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದ್ರೂ ಅದನ್ನು ಪಾಲನೆ ಮಾಡಲ್ಲ. ಅವರಿವರು ಆರೋಪ ಮಾಡುತ್ತಾರೆ ಅಂತಾ ನಾವು ಇಲಾಖೆ ನಡೆಸೋಲ್ಲ. ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ.

ಜಿ.ಪರಮೇಶ್ವರ್​ ಅಸಮರ್ಥ ಗೃಹ ಸಚಿವ ಎಂಬ ಜೋಶಿಯವರ ಲೇವಡಿ ವಿಚಾರವಾಗಿ ತಿರುಗೇಟು ನೀಡಿ, ಪ್ರಲ್ಹಾದ್ ಜೋಶಿಯವರು ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ಳುತ್ತಾರಾ? ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಹಾಗಾಗಿ ಅವರು ಹಾಗೆ ಹೇಳಿದ್ದಾರೆಂದರು‌.

ಕಳೆದ ಗುರುವಾರ ವಿಧಾನಪರಿಷತ್ ನಲ್ಲಿ ಚರ್ಚೆ ನಡೆಯುತ್ತಿರುವ ವೇಳೆ ಸಿ.ಟಿ. ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ವರ್ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಳರ್, ಸಿ.ಟಿ. ರವಿಯವರನ್ನು ಕೊಲೆಗಾರ ಎಂದು ನಿಂದಿಸಿದ್ದರೆ ಪ್ರತ್ಯುತ್ತರವಾಗಿ ಸಿ.ಟಿ. ರವಿ ಅಸಾಂವಿಧಾನಿಕ ಪದವೊಂದನ್ನು ಬಳಸಿ ನಿಂದಿಸಿದ್ದರು.

ಈ ಪ್ರಕರಣದ ಸಂಬಂಧ ಹಳೇಹುಬ್ಬಳ್ಳಿ ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆಯಲಾಗಿದೆ. ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದ್ದೇರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಈ ಪ್ರಕರಣದಲ್ಲಿ ಸಿಟಿ ರವಿಯವರನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಬಳಿಕ ಸೋಮವಾರ ಸಿಟಿ ರವಿ ಸದನದಲ್ಲಿ ಮಾಡಿ ಪದ ಪ್ರಯೋಗದ ವಿಡಿಯೋವನ್ನು ನಿನ್ನೆ ಬಿಡುಗಡೆ ಮಾಡಿದ್ದ ಲಕ್ಷ್ಮೀ ಹೆಬ್ಬಾಳ್ಳರ್ ಅವರು ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಕಾನೂನು ಸಮರದ ಮುನ್ಸೂಚನೆ ನೀಡಿದ್ದರು.

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]