ಬೆಂಗಳೂರು Weather today: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸೋಮವಾರ ಮೋಡ ಕವಿದ ವಾತಾವರಣ ಕಂಡು ಬಂದಿದ್ದು, ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲ ಪ್ರದೇಶಗಳಲ್ಲಿ ಡಿ.24 ರಿಂದ ಡಿ.28ರವರೆಗೆ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: Accident: ಮಧುರೆ ಶನಿಮಹಾತ್ಮ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಕ್ಯಾಂಟರ್ ಡಿಕ್ಕಿ.. ದಂಪತಿಗಳ ದುರ್ಮರಣ..!
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಮತ್ತು ಬಳ್ಳಾರಿಯಲ್ಲಿ ಡಿ.27 ಮತ್ತು ಡಿ.28ರಂದು ಬಿರುಸಾಗಿ ಮಳೆಯಾಗಲಿದೆ. ಆದರೆ, ದಕ್ಷಿಣ ಕರ್ನಾಟಕ ವ್ಯಾಪ್ತಿಯ ಕೆಲ ಜಿಲ್ಲೆಗಳಲ್ಲಿ ಡಿ.24 ರಿಂದ ಹಗುರದಿಂದ ಕೂಡಿದ ಮಳೆಯಾಗಲಿದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಡಿ.26ರವರೆಗೆ ಸಾಧಾರಣ ಬೆಳಗಾವಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿ.27ರಂದು ಜೋರಾಗಿ ವರ್ಷಾಧಾರೆಯಾಗಲಿದೆ.
ಡಿ.24 ರಿಂದ ಡಿ.26ರವರೆಗೆ ಉತ್ತರ ಕರ್ನಾಟಕದ ಭಾಗದ ಕೆಲವಡೆ ತುಂತುರು ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.