ದೊಡ್ಡಬಳ್ಳಾಪುರ (Doddaballapura): ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಬೆಳಗ್ಗೆ 10ಗಂಟೆಗೆ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದು, ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿನ ತಹಶಿಲ್ದಾರ್ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ ಸೇರಿದಂತೆ ಬಹುತೇಕ ಕಚೇರಿಗಳಿಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೃಷ್ಣ ಬೈರೇಗೌಡ ಅವರು ಕೆರಳಿದ್ದಾರೆ.
ಉಪವಿಭಾಗಾಧಿಕಾರಿ, ತಹಶಿಲ್ದಾರ್ ಸೇರಿದಂತೆ ಯಾರೋಬ್ಬರು ಇದುವರೆಗೂ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗದೆ ಉಳಿದಿದ್ದಾರೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)