ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಇನ್‌ಸ್ವಾಗ್ರಾಮ್ ಇನ್ಸುಯೆನ್ಸರ್ ಹಾಗೂ ಜನಪ್ರಿಯ ಸ್ವತಂತ್ರ ರೇಡಿಯೋ ಜಾಕಿಯಾಗಿದ್ದ ಸಿಮ್ರಾನ್ ಸಿಂಗ್ ಅವರು ಗುರುಗ್ರಾಮ್‌ನಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ (Suicide) ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅವರಿಗೆ 25 ವರ್ಷ ವಯಸ್ಸಾಗಿತ್ತು.
ಜಮ್ಮು ಮತ್ತು ಕಾಶ್ಮೀರ ಮೂಲದ ಸಿಮ್ರಾನ್ ಅವರು ಇನ್ಸಾಗ್ರಾಮ್ ನಲ್ಲಿ ಸುಮಾರು ಏಳು ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದರು. ಅವರು ಕೊನೆಯದಾಗಿ ಡಿಸೆಂಬರ್ 13 ರಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದರು.
ತಮ್ಮ ಸೆಕ್ಟರ್ 47ರಲ್ಲಿರುವ ಅಪಾರ್ಟ್ ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಮತ್ತು ಅವರೊಂದಿಗೆ ವಾಸಿಸುತ್ತಿದ್ದ ಸ್ನೇಹಿತರೊಬ್ಬರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ವರದಿಯ ಪ್ರಕಾರ, ಪೊಲೀಸರು ಸಿಮ್ರಾನ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ. ಮೃತದೇಹವನ್ನು ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಸಿಮ್ರಾನ್ ಅವರನ್ನು ಅವರ ಅಭಿಮಾನಿಗಳು ಪ್ರೀತಿಯಿಂದ ಜಮ್ಮು ಕಿ ಧಡ್ಕನ್’ (ಜಮ್ಮುವಿನ ಹೃದಯ ಬಡಿತ) ಎಂದು ಕರೆಯುತ್ತಿದ್ದರು.
ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಸರೆನ್ಸ್ (ಜೆಕೆಎನ್‌ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸಿಮ್ರಾನ್ ಸಿಂಗ್ ಅವರ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.