Site icon Harithalekhani

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ ರೇವಂತ್ ರೆಡ್ಡಿ ಗುಡುಗಿಗೆ ಬೆದರಿದ ತೆಲುಗು ಚಿತ್ರರಂಗ..!

ಹೈದರಾಬಾದ್: ಅಲ್ಲು ಅರ್ಜುನ್ ನಟನೆಯ Pushpa 2 ಸಿನಿಮಾ ಪ್ರಿಮಿಯರ್ ಶೋ ವೇಳೆ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಸಾವನಪ್ಪಿದ್ದು, ಒಂಬತ್ತು ವರ್ಷದ ಬಾಲಕ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಈ ಕುರಿತು ಕೆರಳಿದ ಮುಖ್ಯಮಂತ್ರಿ ರೇವಂತ್ ರೆಡ್ಡಿ ನಟ ಅಲ್ಲು ಅರ್ಜುನ್ ಹಾಗೂ ಆಸ್ಪತ್ರೆಯಲ್ಲಿರುವ ಬಾಲಕನ ಭೇಟಿಯಾಗಿ ಆರೋಗ್ಯ ವಿಚಾರಿಸದ ತೆಲುಗು ಚಿತ್ರರಂಗದ ವರ್ತನೆಯ ವಿರುದ್ಧ ಸದನದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಅಲ್ಲದೆ ಸಿನಿಮಾಗಳಿಗೆ ನೀಡಲಾಗುತ್ತಿದ್ದ ಬೆನಿಫಿಟ್ ಶೋ, ಟಿಕೆಟ್ ದರ ಹೆಚ್ಚಳಗಳನ್ನು ರದ್ದು ಮಾಡಿ ಚಿತ್ರರಂಗದ ಬಗ್ಗೆ ಕಠಿಣ ನಿಲವು ತಳೆದಿದ್ದರು.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ತೆಲುಗು ಚಿತ್ರರಂಗದ ಗಣ್ಯರು ಇಂದು (ಡಿಸೆಂಬರ್ 26) ಸಿಎಂ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಸಭೆ ನಡೆಸಿದ್ದಾರೆ.

ಆದರೆ ಸಭೆ ಯಶಸ್ವಿಯಾಗಿಲ್ಲ ಎನ್ನಲಾಗುತ್ತಿದೆ. ಬೆನಿಫಿಟ್ ಶೋಗಳಿಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಸಿಎಂ ರೇವಂತ್ ರೆಡ್ಡಿ ಚಿತ್ರರಂಗದ ಗಣ್ಯರೆದುರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಸಿನಿಮಾ ಟಿಕೆಟ್ ದರ ಹೆಚ್ಚಳದ ಬಗ್ಗೆ ಚರ್ಚೆ ಜಾರಿಯಲ್ಲಿದ್ದು, ಈ ಬಗ್ಗೆ ಮುಂದೆ ಕೆಲವು ಸುತ್ತುಗಳ ಸಭೆಯ ಬಳಿಕ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ ಎಂದು ವರದಿಯಾಗಿದೆ.

ಹಿರಿಯ ನಿರ್ದೇಶಕ ರಾಘವೇಂದ್ರ ರಾವ್, ಖ್ಯಾತ ನಟರಾದ ವೆಂಕಟೇಶ್, ನಾಗಾರ್ಜುನ ಮತ್ತಿತರರು ಸರ್ಕಾರ ಹಾಗೂ ಚಿತ್ರರಂಗದ ನಡುವಿನ ಸಮನ್ವಯತೆ ಸಾಗುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ಆದರೆ ಇತ್ತಿಚಿನ ಕಾರ್ಯಕ್ರಮವೊಂದರಲ್ಲಿ ಸರ್ಕಾರದ ಸಿಎಂ ರೇವಂತ್ ರೆಡ್ಡಿ ವಿರುದ್ಧ ಮಾತನಾಡಿದ್ದ ಹಿರಿಯ ನಟ, ಅಲ್ಲು ಅರ್ಜುನ್ ಸೋದರ ಮಾವ ಚಿರಂಜೀವಿ ಗೈರು ಹಾಜರಿ ಸಭೆಯಲ್ಲಿ ಕಂಡುಬಂದಿತು.

Exit mobile version