ಚೆನ್ನೈ: ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ (Annamalai) ಚಾಟಿಯಿಂದ ತಮಗೆ ತಾವೇ ಹೊಡೆದುಕೊಳ್ಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ ಸುದ್ದಿಯಾಗಿದ್ದಾರೆ.
ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ.
ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್ನಲ್ಲಿ ಅತ್ಯಾಚಾರ ನಡೆದಿದೆ. ಇದರ ವಿರುದ್ಧ ವಿಧ್ಯಾರ್ಥಿನಿ ಪೊಲೀಸರಿಗೆ ದೂರನ್ನು ನೀಡಿದ್ದರು.
ಪೊಲೀಸರು ಜ್ಞಾನಶೇಖರನ್ ಎಂಬಾತನನ್ನು ಬಂಧಿಸಿದ್ದರು. ಈತ ಯುವತಿಯ ಖಾಸಗಿ ವಿಡೀಯೋ ಚಿತ್ರಿಕರಿಸಿಕೊಂಡು ಬ್ಲಾಕ್ಮೇಲ್ ಮಾಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದನು ಎಂಬ ಆರೋಪವಿದೆ.
ಡಿಎಂಕೆ ಸರ್ಕಾರದ ಆಡಳಿತದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ.
ಜೊತೆಗೆ 48 ದಿನಗಳ ಸುದೀರ್ಘ ಉಪವಾಸ ಕೈಗೊಂಡಿರುವ ಅಣ್ಣಾಮಲೈ , ಆರು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ .