Doddaballapura: ಸರ್ಕಾರಿ ಜಮೀನು ಕಬಳಿಸಿ ಲೇಔಟ್ ‌ನಿರ್ಮಾಣದ ಆರೋಪ.. ಕರವೇ ಆಕ್ರೋಶ

ದೊಡ್ಡಬಳ್ಳಾಪುರ (Doddaballapura): ಕಂದಾಯ ಇಲಾಖೆ ನಿವೃತ್ತ ನೌಕರನೋರ್ವ ಲೇಔಟ್ ನಿರ್ಮಿಸುವ ಸಲುವಾಗಿ ಸರ್ಕಾರಿ ಜಮೀನು ಕಬಳಿಸಲು ಮುಂದಾಗಿದ್ದಾರೆಂದು ಆರೋಪಿ ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಕಸಬಾ ಹೋಬಳಿ ಅರ್ಕಾವತಿ ದೇವಾಲಯದ ಬಳಿ ನಡೆದಿದೆ.

ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ದೇವಾಲಯದ ಜಮೀನಿಗೆ ಹೊಂದಿ ಕೊಂಡಂತಿರುವ ಈ ಜಮೀನು ಸರ್ಕಾರಿ ಬಂಡೆ ಖರಾಬು ಜಮೀನಾಗಿದೆ. ಆದರೆ ಈ ಜಾಗದಲ್ಲಿದ್ದ ಬಂಡೇ ರಾತ್ರೋ ರಾತ್ರಿ ಕಾಣೆಯಾಗಿದ್ದು, ಇಲ್ಲಿದ್ದ ಮರಗಳನ್ನು ಕಡಿದು, ರಾಜ ಕಾಲುವೆಯನ್ನು ಮುಚ್ಚಲಾಗಿದೆ.

ಈ ಜಮೀನು ಹೆದ್ದಾರಿಗೆ ಕಾಣುತ್ತಿದ್ದು, ಎಲ್ಲಾ ಅಧಿಕಾರಿಗಳು ಅದರ ಮೇಲೆಯೇ ಓಡಾಡುತ್ತಾರೆ. ಆದರೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಣ್ಣು ಕಾಣಿಸ್ತಾ ಇಲ್ಲ. ಯಾರಾದ್ರೂ ಅಮಾಯಕರು 10 ಅಡಿ, 5 ಅಡಿ ತಿಳಿಯದೆ ಮನೆ ಕಟ್ಟಿದ್ದರೆ, ಅಲ್ಲಿಗೆ ಬಂದು ದರ್ಪ ತೋರಿಸಲು ಮಾತ್ರ ಸೀಮಿತವಾಗಿದ್ದಾರೆ. ಕೂಡಲೇ ತಾಲೂಕು ಆಡಳಿತ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಈ ಜಮೀನು ಹಾಗೂ ಇಲ್ಲಿರುವ ವಾಹನಗಳನ್ನು ವಶಕ್ಕೆ ಪಡೆದು, ರಕ್ಷಿಸಬೇಕೆಂದು ಒತ್ತಾಯಿಸಿದರು.

ಅಲ್ಲದೆ ದೊಡ್ಡಬಳ್ಳಾಪುರ ತಾಲೂಕಿನ ಅಕ್ರಮ ಲೇಔಟ್ಗಳು ಇದೇ ರೀತಿ ನಡೆಯುತ್ತಿವೆ ಎಂದು ಆರೋಪಿಸಿದ ರಾಜಘಟ್ಟರವಿ, ಬಫರ್ ಜೋನ್‌ಗಳನ್ನು ತಿಂದುಹಾಕುತ್ತಿರುವ ಭೂಗಳ್ಳರು, ಕೆರೆಗಳಲ್ಲಿ ಲೇಔಟ್ ಮಾಡ್ತಾ ಇದ್ದಾರೆ.

ಈ ಕುರಿತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಬಂದಿದ್ದರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಪ್ರಶ್ನಿಸಿದರೆ ಸಬೂಬು ಹೇಳುತ್ತಾರೆ. ಆದರೆ ನಮ್ಮ ಗಮನಕ್ಕೆ ಬಂದ ಈ ರೀತಿಯ ಪ್ರಕರಣಗಳ ವಿರುದ್ಧ ಕ್ರಮಕೈಗೊಳ್ಳದ ಹೊರತು ನಾವು ಸುಮ್ಮನೆ ಕೂರುವುದಿಲ್ಲ ಎಂದರು.

ಈ ವೇಳೆ ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾ ಮುಖಂಡರಾದ ಶ್ರೀನಗರ ಮನು, ಫಯಾಸ್, ಜೋಗಳ್ಳಿ ವಹೀದ್, ಮೋಹನ್, ರಮೇಶ್, ಸ್ಥಳೀಯರಾದ ಹಮಾಮ್ ಚಂದ್ರು, ಹರೀಶ್, ಅನಿಲ್ ಮತ್ತಿತರರಿದ್ದರು.

ರಾಜಕೀಯ

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ವಿಜಯೇಂದ್ರಗೆ ಯತ್ನಾಳ್ ಬಹಿರಂಗ ಸವಾಲು..!

ಬಿಜೆಪಿ ಮುಕ್ತ ಆಗುವುದಿಲ್ಲವೋ ಅಲ್ಲಿಯವರೆಗೆ ನಾನು ಪಕ್ಷ ಸೇರ್ಪಡೆ ಆಗುವುದಿಲ್ಲ ಎಂದು ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. Bjp

[ccc_my_favorite_select_button post_id="105018"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

‘ಪ್ರೀತಿಸಿದವಳಿಗಾಗಿ ದೊಡ್ಡಬಳ್ಳಾಪುರ ಬಾರ್ನಲ್ಲಿ ಬಡಿದಾಟ: ದೂರು ದಾಖಲು’

ಗುಂಪುಗಳ ನಡುವಿನ ಕಂಡು ಬೆಚ್ಚಿ ಬಿದ್ದ ಜನರು. ದೊಡ್ಡಬಳ್ಳಾಪುರ ನಗರದಲ್ಲಿ ಇತ್ತೀಚೆಗೆ ಪುಂಡರ ಹಾವಳಿ ಮೀತಿ ಮೀರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Doddaballapura

[ccc_my_favorite_select_button post_id="105003"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!