ದೊಡ್ಡಬಳ್ಳಾಪುರ: ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಗಲಿಕೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ (Manmohan Singh) ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, 10 ವರ್ಷಗಳ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಹಲವು ಮಹತ್ತರವಾದ ಶಾಶ್ವತ ಯೋಜನೆಗಳ ನೀಡಿದ ಮಹಾನ್ ವ್ಯಕ್ತಿ ಮನಮೋಹನ್ ಸಿಂಗ್ ಅಂತವರು ಮತ್ತೆ ಹುಟ್ಟಿ ಬರುವುದಿಲ್ಲ.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನ ಹೊಂದಿರುವ ಸುದ್ದಿ ಕೇಳಿ ಅತ್ಯಂತ ದುಖ ಉಂಟು ಮಾಡಿದೆ. ಆರ್ಥಿಕ ತಜ್ಞರಾಗಿ, ಪ್ರಧಾನ ಮಂತ್ರಿಯಾಗಿ ದೇಶದ ಆರ್ಥಿಕತೆಗೆ ದೊಡ್ಡ ಬದಲಾವಣೆ ತಂದಿದ್ದರು.
ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿ.ಮುನೇಗೌಡ ತಿಳಿಸಿದ್ದಾರೆ.