ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಟ್ಟಣದ ಹೊರವಲಯದಲ್ಲಿರುವ ಬೈಪಾಸ್ ರಸ್ತೆಯಲ್ಲಿ ಕಂದಕಕ್ಕೆ ಉರುಳಿ ಬಿದ್ದ (Accident) ಪರಿಣಾಮ ತಂದೆ ಮತ್ತು ಮಗ ಸೇರಿ ಮೂವರು ಸಾವನಪ್ಪಿದ್ದಾರೆ.
ಮೃತ ದುರ್ದೈವಿಗಳನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಎಂದು ತಿಳಿದುಬಂದಿದೆ.
ಶುಕ್ರವಾರ ರಾತ್ರಿ ವಿಟ್ಲ ಸಮೀಪದ ಪುಣಚಕ್ಕೆ ಗೊಂದೊಳು ಪೂಜೆ ಸಲುವಾಗಿ ಅವರು ತೆರಳಿದ್ದರು ಎನ್ನಲಾಗಿದ್ದು. ಕಾರ್ಯಕ್ರಮ ಮುಗಿಸಿ ಶನಿವಾರ ಅಲ್ಲಿಂದ ಮರಳುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿತ್ತು.
ಪುಣಚ ಬುಳೇರಿಕಟ್ಟೆಯಿಂದ ಹೊರಟ ಕಾರು ಒಳ ರಸ್ತೆಯಲ್ಲಿ ಸಾಗಿ ಪುತ್ತೂರು ಬೈಪಾಸ್ ಬಳಿ ಹೆದ್ದಾರಿಯನ್ನು ಸೇರುವ ಜಾಗದಲ್ಲಿ ಈ ಅಪಘಾತ ಸಂಭವಿಸಿದೆ.
ಚಾಲಕ ನಿದ್ದೆ ಮಂಪರಿನಲ್ಲಿ ಇದ್ದುದರಿಂದ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.