ಬೆಂಗಳೂರು; ಮನೆಯಲ್ಲಿ ನೇಣು ಬಿಗಿದುಕೊಂಡು ಕೆಎಸ್‌ಡಿಎಲ್ (KSDL) ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಮೃತ್ ಶಿರೂರ್ (40) ಮೃತಪಟ್ಟ ಅಧಿಕಾರಿ ಎಂದು ಗುರುತಿಸಲಾಗಿದೆ.
ಮುನೇಶ ಬ್ಲಾಕ್‌ನಲ್ಲಿ ವಾಸವಾಗಿದ್ದ ಅವರು ಮೊದಲ ಪತ್ನಿ ಮೃತಪಟ್ಟಿದ್ದು, 2ನೇ ಮದುವೆಯಾಗಿದ್ದರು.
ಇತ್ತೀಚೆಗೆ ಕೌಟುಂಬಿಕ ಕಲಹದಿಂದ ನೊಂದಿದ್ದರು ಮತ್ತು ವಿಚ್ಛೇಧನಕ್ಕೂ ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದರಿದ ಖಿನ್ನತೆಗೊಳಗಾಗಿ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಈ ನಡುವೆ ಡೆತ್‌ನೋಟ್ ಕೂಡ ಪತ್ತೆಯಾಗಿದ್ದು, ಅದರಲ್ಲಿ ಕೆಲವು ಅಧಿಕಾರಿಗಳ ಹೆಸರನ್ನು ಕೂಡ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.