ನೆಲಮಂಗಲ: ಇಲ್ಲಿಯ ದಾಬಸ್ ಪೇಟೆಯ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ಇಂದು ಬೆಳಂಬೆಳಗ್ಗೆ ಸರಣಿ ರಸ್ತೆ ಅಪಘಾತ (Accident) ಸಂಭವಿಸಿದೆ.
ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.
ಮೃತ ದುರ್ದೈವಿಯನ್ನು 55 ವರ್ಷದ ವೀರಣ್ಣ ಎಂದು ಗುರುತಿಸಲಾಗಿದೆ.
ಕೈಗಾರಿಕಾ ಪ್ರದೇಶದ ಹೆಬ್ಬಾಗಿಲು ಮುಂಭಾಗದಲ್ಲಿ ಪ್ಯಾಸೆಂಜರ್ ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ಘಟನೆಯಲ್ಲಿ ವೀರಣ್ಣ ಸ್ಥಳದಲ್ಲೇ ಮೃತಪಟ್ಟರೆ, ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿ ಸೇರಿದಂತೆ ಹಲವರು ಗಾಯಗೊಂಡಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ.
ರಸ್ತೆ ಪಕ್ಕ ನರಳಾಡುತ್ತಿದ್ದ ಪ್ರಯಾಣಿಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.