ಬೆಂಗಳೂರು ಗ್ರಾಮಾಂತರ ಜಿಲ್ಲೆ: ಹೊಸ ವರ್ಷಾಚರಣೆ-2025 ರ (New year celebration) ಸಂಬಂಧ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಆದೇಶಿಸಿದ್ದಾರೆ.
ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿವಗಂಗೆ ಬೆಟ್ಟ, ಸಿದ್ದರಬೆಟ್ಟ, ಮಾಕಳಿದುರ್ಗ, ಆವತಿ ಬೆಟ್ಟ ಮತ್ತು ನಂದಿಬೆಟ್ಟದ ತಪ್ಪಲುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಪ್ರದೇಶಗಳಿಗೆ 2024 ರ ಡಿಸೆಂಬರ್ 30ರ ಸಂಜೆ 6.00 ಗಂಟೆಯಿಂದ 2025 ರ ಜನವರಿ 01 ರ ಮಧ್ಯರಾತ್ರಿ 12 ಗಂಟೆಯವರೆಗೆ ಒಟ್ಟು 03 ದಿನಗಳ ಕಾಲ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಆದೇಶಿಸಿದ್ದಾರೆ.