ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ (Shivarajkumar) ಅವರಿಗೆ ಕೆಲ ದಿನಗಳ ಹಿಂದೆಯಷ್ಟೇ ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಸಹ ನಡೆದಿದ್ದು ಇದೀಗ ಶಸ್ತ್ರಚಿಕಿತ್ಸೆ ಬಳಿಕ ಇದೇ ಮೊದಲ ಬಾರಿಗೆ ಶಿವಣ್ಣ ಪ್ರಕ್ರಿಯಿಸಿದ್ದಾರೆ.
ವಿಡಿಯೋ ಮೂಲಕ ತಮ್ಮ ಆರೋಗ್ಯದ ಬಗ್ಗೆ ಸ್ವತಃ ಮಾಹಿತಿ ನೀಡಿದ್ದು, ಹೊಸ ವರ್ಷದ ಶುಭಾಶಯವನ್ನು ಕೂಡ ಹೇಳಿದ್ದಾರೆ.
ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿರುವ ಶಿವಣ್ಣ ಅವರ ಆರೋಗ್ಯದ ಎಲ್ಲ ವರದಿಗಳು ನೆಗೆಟಿವ್ ಬಂದಿವೆ. ಖುದ್ದು ಶಿವಣ್ಣ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಕ್ಯಾನ್ಸರ್‌ದಿಂದ ಮುಕ್ತಿ ಪಡೆದಿರುವುದಾಗಿ ಗೀತಾ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ.
ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಎಲ್ಲ ವರದಿಗಳು ನೆಗೆಟಿವ್ ಬಂದಿದೆ. ಫೆತಾಲಜಿ ರಿಪೋರ್ಟ್ ಬರುವವರೆಗೆ ಸ್ವಲ್ಪ ಆತಂಕ ಇತ್ತು, ಆದರೆ ಈಗ ಆ ವರದಿಯೂ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿವೆ. ನೀವುಗಳು ಮಾಡಿರುವ ಪ್ರಾರ್ಥನೆ ತೋರಿದ ಪ್ರೀತಿ ಮತ್ತು ಬೆಂಬಲವನ್ನು ಜೀವನ ಇರುವವರೆಗೆ ಮರೆಯುವುದಿಲ್ಲ ಎಂದು ಹೇಳಿ ಭಾವುಕರಾದರು.
ಶಿವಣ್ಣ ಮಾತನಾಡಿ, ಭಯ ಆಗುತ್ತದೆ ಎಮೋಷನಲ್ ಆಗುತ್ತೇನೆ ಹೊರಡುವಾಗ ಸ್ವಲ್ಪ ಎಮೋಷನಲ್ ಆಗಿದ್ದೆ ಭಯ ಎನ್ನುವುದು ಇದ್ದೇ ಇರುತ್ತೆ ಮನುಷ್ಯನಿಗೆ ಆದರೆ ಆ ಭಯವನ್ನು ದೂರ ಮಾಡಲು ಅಂತನೇ ಅಭಿಮಾನಿ ದೇವರುಗಳಿರುತ್ತಾರೆ, ಸಹ ಕಲಾವಿದರು ಇರ್ತಾರೆ, ಸ್ನೇಹಿತರು ಇರ್ತಾರೆ, ಸಂಬಂಧಿಕರು ಇರ್ತಾರೆ, ಎಲ್ಲಕ್ಕಿಂತ ಹೆಚ್ಚಾಗಿ ಡಾಕ್ಟರ್ಗಗಳು ಇರ್ತಾರೆ ಎಂದು ಹೇಳಿದ್ದಾರೆ.