Site icon ಹರಿತಲೇಖನಿ

Accident: ಕೆರೆಗೆ ಉರುಳಿಬಿದ್ದ ಕಾರು.. ಮಾದಪ್ಪನ ದರ್ಶನಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು..!

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ (Accident) ಕುಂತೂರು ಬಳಿ ಘಟನೆ ನಡೆದಿದೆ.

ಮೃತ ದುರ್ದೈವಿಗಳನ್ನು ಸುರ್ಜಿತ್(25 ವರ್ಷ), ಶುಭ(21 ವರ್ಷ) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೋರ್ವ ಮನ್ವಿತ್ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೊಸ ವರ್ಷ ಹಿನ್ನೆಲೆ ಮಾದಪ್ಪನ ದರ್ಶನಕ್ಕೆ ಎಲ್ಲರೂ ಹೊರಟಿದ್ದರು. ಮಧ್ಯರಾತ್ರಿ ಕಾರು ವೇಗವಾಗಿ ತೆರಳುತ್ತಿತ್ತು. ಈ ವೇಳೆ ಚಾಲಕಮ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿದೆ.

ಚಾಲಕನ ನಿದ್ರೆ ಮಂಪರಿನಿಂದ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ ಎಂದು ವರದಿಯಾಗಿದೆ.

Exit mobile version