ನವದೆಹಲಿ: ವಿಶ್ವ ಚೆಸ್ ಚಾಂಪಿಯನ್‌ಶಿಪ್ ವಿಜೇತ ಡಿ ಗುಕೇಶ್ ಜೊತೆ ಒಟ್ಟು ನಾಲ್ಕು ಕ್ರೀಡಾಪಟುಗಳಿಗೆ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಖೇಲ್ ರತ್ನ (Khel ratna) ಪ್ರಶಸ್ತಿಯನ್ನು ಘೋಷಿಸಿದೆ.
ಗುಕೇಶ್ ಜೊತೆ ಡಬಲ್ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್, ಭಾರತೀಯ ಪುರುಷರ ಹಾಕಿ ಟೀಂನ ನಾಯಕ ಹರ್ಮನ್ಪ್ರೀತ್ ಸಿಂಗ್ ಹಾಗೂ ಪ್ಯಾರಾ ಒಲಿಂಪಿಯನ್ ಪ್ರವೀಣ್ ಕುಮಾರ್ಗೂ ಕೂಡ ಈ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.
ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ.
ಕ್ರೀಡಾ ಸಮಿತಿಯ ಶಿಫಾರಸ್ಸು ಹಾಗೂ ಹಲವು ಪರಿಶೀಲನೆಗಳನ್ನು ನಡೆಸಿದ ಬಳಿಕ ಈ ನಾಲ್ವರಿಗೆ ಈ ವರ್ಷದ ಖೇಲ್ರತ್ನ ನೀಡಲು ನಿರ್ಧರಿಸಿದೆ.