ಕೃಷ್ಣಾವರಂ: ಟೋಲ್ ಪ್ಲಾಜಾದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಕಾನ್‌ಸ್ಟೆಬಲ್‌ಗಳ ಮೇಲೆ ದುಷ್ಕರ್ಮಿಗಳು ಕಾರು ಹತ್ತಿಸಿ ಪರಾರಿಯಾಗಿರುವ ಘಟನೆ (video) ಡಿ.31ರ ರಾತ್ರಿ ನೆರೆಯ ಆಂದ್ರಪ್ರದೇಶದ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕಾಕಿನಾಡ – ಕಿರ್ಲಂಪುಡಿ ಮಂಡಲದ ಕೃಷ್ಣಾವರಂ ಟೋಲ್ ಪ್ಲಾಜಾದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಕಾನ್ಸ್‌ಟೇಬಲ್‌ಗಳ ಮೇಲೆ ದುಷ್ಕರ್ಮಿಗಳು ಕಾರು ಹತ್ತಿಸಿ ಪರಾರಿಯಾಗಿದ್ದಾರೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಮಾದಕ ವಸ್ತು ಕಳ್ಳಸಾಗಣೆ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಶೋಧ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಮಧ್ಯರಾತ್ರಿಯ ಸುಮಾರಿಗೆ, ಪೊಲೀಸರು ಎಸ್‌ಯುವಿಯನ್ನು ನಿಲ್ಲಿಸಿದರು. ವೀಡಿಯೊದಲ್ಲಿ ಚಾಲಕನು ಕಾರನ್ನು ನಿಧಾನಗೊಳಿಸುವುದನ್ನು ತೋರಿಸುತ್ತದೆ, ಅದು ಇದ್ದಕ್ಕಿದ್ದಂತೆ ವೇಗವಾಗಿ ಚಲಿಸುತ್ತದೆ.
ಘಟನೆಯಲ್ಲಿ ಓರ್ವ ಪೇದೆ ಗಂಭೀರವಾಗಿ ಗಾಯಗೊಂಡಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರ ಸಹೋದ್ಯೋಗಿಗಳು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.
ಶಂಕಿತರು ಪೊಲೀಸರಿಗೆ ಡಿಕ್ಕಿ ಹೊಡೆದ ನಂತರ ತಮ್ಮ ಕಾರನ್ನು ರಾಜನಗರದ ಕೆನಾಲ್ ರಸ್ತೆಯ ಬಳಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಪತ್ತೆ ಮಾಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.