ದೊಡ್ಡಬಳ್ಳಾಪುರ: ಇತ್ತೀಚೆಗೆ ನಿಧನರಾದ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಹಿರಿಯ ಮುಖಂಡ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿವಾಸಕ್ಕೆ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ (Dr K Sudhakar) ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಅವರು, ಸುಮಾರು ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿದ್ದ ಅಪ್ಪಯ್ಯಣ್ಣನವರು ಬೆಂಗಳೂರು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಬಮುಲ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ಹೀಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಛಾಪು ಉಳಿಸಿಕೊಂಡಿದ್ದರು.
ಅವರ ಆತ್ಮಕ್ಕೆ ಸದ್ಗತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕೊಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ಬಿಜೆಪಿ ಮುಖಂಡ ಕೆಎಂ ಹನುಮಂತರಾಯಪ್ಪ, ಮುಖಂಡರಾದ ಹುಸ್ಕೂರ್ ಆನಂದ್, ಹಾಡೋನಹಳ್ಳಿ ನಾಗರಾಜು, ಕುಂಟನಹಳ್ಳಿ ಮಂಜುನಾಥ್, ನ್ಯಾಯವಾದಿ ಮುರುಳಿಧರ್, ಮುನೇಗೌಡ, ಪುರೋಷತ್ತಮ್, ಸತೀಶ್, ಜೋನಾ ಮಲ್ಲಿರ್ಖಾರ್ಜುನ್, ನಾರಾಯಣಸ್ವಾಮಿ, ಕುರುಬಗೆರೆ ಮುರುಳಿ, ಬೀಡಿಕೆರೆ ಗೌರೀಶ್, ಪುಟ್ಟ ಬಸವರಾಜು ಮತ್ತಿತರರಿದ್ದರು.