ಮಧುಗಿರಿ: ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಚೇರಿಯಲ್ಲೇ ಮಧುಗಿರಿ DYSP ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ವಿಡಿಯೋ ಗುರುವಾರ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಅಮನತು ಮಾಡಿ ಡಿಜಿ ಆದೇಶಿಸಿದ್ದಾರೆ.
ಮಧುಗಿರಿ ಡಿವೈಎಸ್ಪಿ ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಮಹಿಳೆಯನ್ನು ತನ್ನ ಕಚೇರಿಯಲ್ಲಿನ ಶೌಚಾಲಯಕ್ಕೆ ಕರೆದುಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು.
ಇದನ್ನು ಕಿಟಕಿಯ ಮೂಲಕ ವ್ಯಕ್ತಿಯೊಬ್ಬ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದು ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್ಪಿಯನ್ನು ಸಸ್ಪೆಂಡ್ ಮಾಡಲಾಗಿದೆ.