ಬೆಂಗಳೂರು, (Shakti scheme): ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಜಾರಿಯಾದಾಗಿಂದ ಬಿಜೆಪಿ ಹಾಗೂ ಅದರ ಬೆಂಬಲಿಗ ಖಾಸಗಿ ಮಾಧ್ಯಮಗಳು ರಾಜ್ಯದ ಆರ್ಥಿಕ ಸ್ಥಿತಿ ಸತ್ತೋಗಿದೆ, ಖಜಾನೆ ಖಾಲಿಯಾಗಿದೆ ಎಂಬಂತೆ ಬಿಂಬಿಸುತ್ತಲೇ ಬರುತ್ತಿವೆ ಎಂಬ ಆರೋಪ ವ್ಯಾಪಕವಾಗಿದೆ.
ಅದರಲ್ಲೂ ಜ.05 ರಿಂದ ಡಿಸೆಲ್ ಬೆಲೆ ಏರಿಕೆ, ಸಿಬ್ಬಂದಿಗಳ ವೇತನ ಹೆಚ್ಚಳದಿಂದ ಸಾರಿಗೆ ಇಲಾಖೆ ಟಿಕೆಟ್ ದರ ಶೇ.15 ರಷ್ಟು ಏರಿಕೆ ಬೆನ್ನಲ್ಲೇ, ಕರ್ನಾಟಕ ಸಾರಿಗೆ ಇಲಾಖೆ ಶಕ್ತಿ ಯೋಜನೆಯಿಂದ ದಿವಾಳಿಯಾಗಿದೆ ಎಂಬತೆ ಸುದ್ದಿಯನ್ನು ರಾಷ್ಟ್ರ ಮಟ್ಟದಲ್ಲಿ ಹಬ್ಬಿಸುತ್ತಿವೆ ಎಂಬದು ಕಾಂಗ್ರೆಸ್ ಬೆಂಬಲಿಗರ ಆಕ್ಷೇಪ.
ಆದರೆ ಬಿಜೆಪಿ ಹಾಗೂ ಅದರ ಬೆಂಬಲಿಗರಿಗೆ ಮುಜುಗರವನ್ನು ಉಂಟು ಮಾಡುವಂತಹ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದು, ಗ್ಯಾರಂಟಿ ಯೋಜನೆ ಕುರಿತು ಸುಳ್ಳೆ ನಮ್ಮ ಮನೆ ದೇವರು ಎಂಬಂತೆ ವರ್ತಿಸುತ್ತಿದ್ದವರು ಶಾಕ್ ಗೆ ಒಳಗಾಗಿದ್ದಾರೆ.
ಇದಕ್ಕೆ ಕಾರಣ ಬಿಜೆಪಿ ಮಿತ್ರಪಕ್ಷವಾದ ಆಂಧ್ರಪ್ರದೇಶದ ಸರ್ಕಾರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಹಾಗೂ ಈ ಇಲಾಖೆಗಳ ಅಧಿಕಾರಿಗಳ ತಂಡ ಇಂದು ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಸಭೆ ನಡೆಸಿದ್ದಾರೆ.
ರಾಜ್ಯದಲ್ಲಿ ಯಶಸ್ವಿಯಾಗಿರುವ ಗ್ಯಾರಂಟಿ ಯೋಜನೆಗಳ ಆರ್ಥಿಕತೆ, ಸಾಧನೆಗಳ ಕುರಿಂತೆ ಚರ್ಚಿಸಿದೆ. ಅದರಲ್ಲೂ ಮುಖ್ಯವಾಗಿ ಶಕ್ತಿ ಯೋಜನೆಯ ಯಶಸ್ಸಿನಿಂದ ಆರ್ಥಿಕತೆಗೆ ಚೈತನ್ಯ ಸಿಕ್ಕಿರುವುದು ಮತ್ತು ಮಹಿಳಾ ಸಬಲೀಕರಣದ ದೃಷ್ಟಿಯಿಂದ ಆಗಿರುವ ಬದಲಾವಣೆಗಳ ಕುರಿತಂತೆ ಚರ್ಚಿಸಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ.
ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದು ಮಾಹಿತಿ ವಿನಿಮಯ ಮಾಡಿಕೊಂಡರು.