Site icon ಹರಿತಲೇಖನಿ

Doddaballapura| ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ ಬೆಳೆಸಿಕೊಳ್ಳಬೇಕು: ತಹಶಿಲ್ದಾರ್

ದೊಡ್ಡಬಳ್ಳಾಪುರ, (Doddaballapura): ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ತಹಶೀಲ್ದಾರ್ ವಿಭಾವಿದ್ಯಾರಾಥೋಡ್ ಹೇಳಿದರು.

Aravind, BLN Swamy, Lingapura

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾರತ ಸೇವಾದಳ ತಾಲ್ಲೂಕು ಸಮಿತಿ ವತಿಯಿಂದ ಭಾರತ ಸೇವಾ ಸೇವಾದಳ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳದಲ್ಲಿ ಮಾತನಾಡಿದರು.

ಪ್ರಸ್ತುತ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಈಗಿನಿಂದಲೇ ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವಂತಹ ಕೆಲಸ ಆಗಬೇಕು. ಮಹಾತ್ಮ ಗಾಂಧೀಜಿ ಅವರು ಕಂಡಂತಹ ಕನಸು ನನಸಾಗಬೇಕು. ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಗಳನ್ನು ಭಾರತ ಸೇವಾದಳ ನಡೆಸುತ್ತಿರುವುದು ಶ್ಲಾಘನೀಯ ಎಂದರು.

Aravind, BLN Swamy, Lingapura

ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಮಾತನಾಡಿ, ತಾಲ್ಲೂಕಿನಲ್ಲಿ ಇರುವ ಎಲ್ಲಾ ಶಾಲೆಗಳಲ್ಲಿನ ಶಾಖೆಗಳಿಗು ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಗುವುದು ಎಂದರು, ತಾಲ್ಲೂಕಿನ ಶಾಖ ನಾಯಕರು ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಶ್ರಮವಹಿಸುತ್ತಿರುವುದು ತುಂಬಾ ಸಂತೋಷ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಸಮಿತಿ ಅಧ್ಯಕ್ಷ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯಕ್ಕಾಗಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವಹಿಸಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಾಮರಸ್ಯ ಮೂಡಿಸುವಲ್ಲೂ ಮಹತ್ವದ ಕೆಲಸ ಮಾಡುತ್ತಿದೆ ಎಂದರು.

ಭಾವೈಕ್ಯತಾ ಮೇಳದ ಉದ್ಘಾಟನ ಸಮಾರಂಭದಲ್ಲಿ ಟಿಎಪಿಎಂಸಿ ನಿರ್ದೇಶಕ ಎನ್.ಜಿ.ರಂಗಪ್ಪ, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಆರ್.ಮುರುಳಿಧರ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿಸಿದ್ದಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಶ್ರೀಧರ್, ಹೊಸಕೋಟೆ ತಾಲ್ಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್, ನಗರಸಭೆ ಸದಸ್ಯ ಕಾಂತರಾಜ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಸಿ.ರಾಮಕೃಷ್ಣ, ಭಾರತ ಸೇವಾದಳ ತಾಲ್ಲೂಕು ಕಾರ್ಯಾಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ಕೇಶವಮೂರ್ತಿ, ಪ್ರಧಾನ ಕಾರ್ಯದರ್ಶಿ, ವಿ.ಸಿ.ಜ್ಯೋತಿಕುಮಾರ್, ಸಂಘಟಕ ಸುರೇಶ್ ಇದ್ದರು.

Exit mobile version