Site icon ಹರಿತಲೇಖನಿ

JDS ಮುಖಂಡನ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ

ಚಿಕ್ಕಬಳ್ಳಾಪುರ; ಹೆಚ್‌ಡಿ ಕುಮಾರಸ್ವಾಮಿ ಅಪ್ಪಟ ಅಭಿಮಾನಿ, ಜೆಡಿಎಸ್ (JDS) ಮುಖಂಡ ಎನ್.ವೆಂಕಟೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳನ್ನು ಇಬ್ಬರು ಬಂಧಿಸಿದ್ದಾರೆಂದು ತಿಳಿದುಬಂದಿದೆ.

ಧನು ಅಲಿಯಾಸ್ ಧನರಾಜ್ ಹಾಗೂ ಆತನ ಸಹಚರ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಹಳೆಯ ದ್ವೇಷ ಹಿನ್ನಲೆ ಹತ್ಯೆ ನಡೆದಿದೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವೆಂಕಟೇಶ್ ತೆರಳುತ್ತಿದ್ದ ಸ್ಕೂಟಿಯನ್ನು ಅಡ್ಡಗಟ್ಟಿದ್ದ ಧನರಾಜ್ ಹಾಗೂ ಸತೀಶ್ ಮೊದಲು ಹಂದಿ ಕೊಯ್ಯುವ ಚಾಕುವಿನಿಂದ ಬೆನ್ನಿಗೆ ಇರಿದಿದ್ದರು. ನಂತರ ಹೊಟ್ಟೆ, ಮುಖಕ್ಕೆ ಮೂರು ಬಾರಿ ಹೊಡೆದಿದ್ದರು. ಅಲ್ಲದೇ ಕೈ ಕಟ್ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು ಎನ್ನಲಾಗಿದೆ.

ಬಳಿಕ ಆರೋಪಿಗಳು ಬೆಂಗಳೂರಿಗೆ ಪಾರಾರಿಯಾಗಿ ತಲೆ ಮರೆಸಿಕೊಂಡಿದ್ದರು. ಕಳೆದ ರಾತ್ರಿ ಪೊಲೀಸರು ಆರೋಫಿಗಳ ಜಾಡು ಹಿಡಿದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ವೇಳೆ ಹಣಕಾಸು ವಿಚಾರವಾಗಿ ಬಾರ್ ಒಂದರಲ್ಲಿ ಗಲಾಟೆ ನಡೆದಿತ್ತು. ಈ ವೇಳೆ ಧನು ಹಾಗೂ ಅರವಿಂದ್‌ಗೆ ಆಗ ವೆಂಕಟೇಶ್ ಹಿಗ್ಗಾ ಮುಗ್ಗಾ ದಳಿಸಿದ್ದರು ಎನ್ನಲಾಗಿದೆ‌.

ನಂತರ ಧನು ಪರವಾಗಿ ವೆಂಕಟೇಶ್ ಬಳಿ ರಾಜೀ ಮಾಡಲು ಮುಂದಾಗಿದ್ದ ಸತೀಶ್‌ಗೂ ಹೊಡೆದು ಕಳಿಸಲಾಗಿತ್ತು ಇದಾದ ಬಳಿಕ ಧನು, ಸತೀಶ್ ಹಾಗೂ ಅರವಿಂದ್ ಎಲ್ಲಿ ಸಿಕ್ಕರೂ ವೆಂಕಟೇಶ್ ಎಚ್ಚರಿಕೆ ನೀಡುತ್ತಿದ್ದ ಕೊಡ್ತಿದ್ದರಂತೆ

ಇದೇ ವಿಚಾರಕ್ಕೆ ಆರೋಪಿಗಳು ಸಂಚು ರೂಪಿಸಿ ಕಳೆದ ಜ.3ರ ರಾತ್ರಿ ಹತ್ಯೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

Exit mobile version