ಆನೇಕಲ್: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ (Cylinder Blast) ಪರಿಣಾಮ ಮನೆಯಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯಲ್ಲಿ ಸಂಭವಿಸಿದೆ.
ಈ ದುರಂತದಲ್ಲಿ ಸನಿಲ್ ಜೋಸೆಫ್, ವಿಷ್ಣು ಜಯರಾಜ್ ಎಂಬುವವರು ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಲಿಂಡರ್ ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ನಾಲೈದು ಮನೆಗಳಿಗೆ ಹಾನಿಯಾಗಿದ್ದು, ವಾಟರ್ ಲೈನ್, ಕಿಟಕಿ, ಬಾಗಿಲುಗಳೆಲ್ಲ ಫುಲ್ ಪೀಸ್ ಪೀಸ್ ಆಗಿವೆ.
ಜೊತೆಗೆ ಸ್ಫೋಟದ ವೇಳೆ ಮನೆಯ ಗೋಡೆಗಳು ಕೂಡ ಕುಸಿದಿದ್ದು, ಮನೆ ಬಳಿ ನಿಲ್ಲಿಸಿದ್ದ ವಾಹನಗಳು ಜಖಂ ಗೊಂಡಿವೆ.
ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.