ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂಬ ವಿಪಕ್ಷಗಳ ಆರೋಪಕ್ಕೆ ಸಾಕ್ಷಿ ಎಂಬಂತೆ ವಿಡಿಯೋ (Video) ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಧಾನಿ ಮೋದಿ ಅವರು ಟ್ರೋಲ್ಗೆ ಒಳಗಾಗಿದ್ದಾರೆ.
ಈ ಕುರಿತು ಕಾಂಗ್ರೆಸ್ ಕುಹಕವಾಡಿದ್ದು, ಟ್ವಿಟರ್ ನಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ದೆಹಲಿಯಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಟೆಲಿಪ್ರಾಂಪ್ಟರ್ ಕೈಕೊಟ್ಟಾಗ ಮೋದಿಯಿಂದ ‘ಮೌನವೃತ’ ಆಚರಣೆ..
ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಇಲ್ಲದೆ ಒಂದು ಶಬ್ದ ಕೂಡ ಮಾತಾಡಲು ಸಾಧ್ಯವೇ ಇಲ್ಲ… ಏಕೆಂದರೆ ‘ಒಳಗಡೆ’ ಏನೂ ಇಲ್ಲ ಎಂದು ಕುಹಕವಾಡಿದೆ
ಅಲ್ಲದೆ ಕೆಲ ನೆಟ್ಟಿಗರು ಟೆಲಿಪ್ರಾಂಪ್ಟರ್ ಕೈಕೊಟ್ಟಾಗ ಮೋದಿ ಮುಖ ನೋಡೋಕ್ಕಾಗಲ್ಲ… ಪಾಪಾ ಈ ಪರಿಸ್ಥಿತಿ ಬರಬಾರದಿತ್ತು ಎಂದು ಟ್ರೋಲ್ ಮಾಡಿದ್ದಾರೆ.