Voters| ಬೆಂ.ಗ್ರಾ.ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ: ಯುವ ಮತದಾರರ ಹೆಚ್ಚಳ..!

ಬೆಂ ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು (Voters) ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ಶಿವಶಂಕರ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ರ ಸಂಬಂಧ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ನಾಲ್ಕು ತಾಲೂಕುಗಳ ಎಲ್ಲಾ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಈ ಕಛೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ.

ಪ್ರಸಕ್ತ 2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024 ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಇದರಿಂದ 18 ವರ್ಷಗಳನ್ನು ಪೂರೈಸಿದ ಯುವಕರು ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆಯವರೆಗೆ ಕಾಣುವುದನ್ನು ತಪ್ಪಿಸಲಾಗಿದೆ ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗೆಳಲ್ಲಿ ಮಾತು ಚಲಾವಣೆಗೆ ಅವಕಾಶ ದೊರೆಯಲಿದೆ ಎಂದರು.

ಜಿಲ್ಲೆಯಲ್ಲಿ 9.05 ಲಕ್ಷ ಮತದಾರರು

ಜಿಲ್ಲೆಯಲ್ಲಿ ಈಗ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 9,05,724 ಮತದಾರರು ಇದ್ದಾರೆ. ಇದರಲ್ಲಿ 4,46,918 ಪುರುಷ ಮತದಾರರು ಮತ್ತು 4,58,659 ಮಹಿಳಾ ಮತದಾರರು ಹಾಗೂ 147 ಇತರೆ ಮತದಾರರು ಇದ್ದಾರೆ.

ಒಟ್ಟು ಮತದಾರರ ಪೈಕಿ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕರು, 13,431 ವಿಶೇಷ ಚೇತನ ಮತದಾರರು ಹಾಗೂ 121 ಸೇವಾ ಮತದಾರರು ಇದ್ದಾರೆ ಎಂದರು.

ಮಹಿಳಾ ಮತದಾರರು ಹೆಚ್ಚು

ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಒಟ್ಟು 2,21,297 ಮತದಾರರಿದ್ದು, ಅದರಲ್ಲಿ 1,12,171 ಮಹಿಳಾ ಮತದಾರರು ಹಾಗೂ 1,09,125 ಪುರುಷ ಮತದಾರರಿದ್ದಾರೆ.

ಹೊಸಕೋಟೆಯಲ್ಲಿ ಒಟ್ಟು 2,40,998 ಮತದಾರರಿದ್ದು, ಅದರಲ್ಲಿ 1,21,543 ಮಹಿಳೆ ಹಾಗೂ 1,19,434 ಪುರುಷ ಮತದಾರರು ಇದ್ದಾರೆ. ದೇವನಹಳ್ಳಿಯಲ್ಲಿ ಒಟ್ಟು 2,18,343 ಮತದಾರರಿದ್ದು, 1,10,457 ಮಹಿಳಾ ಹಾಗೂ 1,07,869 ಪುರುಷ ಮತದಾರರಿದ್ದಾರೆ. ನೆಲಮಂಗಲದಲ್ಲಿ 2,25,086 ಮತದಾರರ ಪೈಕಿ 1,14,488 ಮಹಿಳೆ ಹಾಗೂ 1,10,490 ಪುರುಷ ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ ಸಾವಿರ ಪುರುಷರಿಗೆ 1027 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1028, ಹೊಸಕೋಟೆಯಲ್ಲಿ 1018, ದೇವನಹಳ್ಳಿ 1024 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1037 ಲಿಂಗಾನುಪಾತ ಕಂಡುಬಂದಿದೆ.

1141 ಮತಗಟ್ಟೆಗಳು

ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು1141 ಮತಗಟ್ಟೆಗಳಿವೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 293 ಮತಗಟ್ಟೆ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 294, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 276, ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 278 ಮತಗಟ್ಟೆಗಳಿದೆ.

13,431ವಿಶೇಷಚೇತನ ಮತದಾರರು

ಹೊಸಕೋಟೆ 3646, ದೇವನಹಳ್ಳಿ 3767 ಹಾಗೂ ದೊಡ್ಡಬಳ್ಳಾಪುರ 3399 ಹಾಗೂ ನೆಲಮಂಗಲದಲ್ಲಿ 2619 ಸೇರಿದಂತೆ ಒಟ್ಟು 12,624 ಮಂದಿ ವಿಶೇಷಚೇತನ ಮತದಾರರಿದ್ದಾರೆ. ಜತೆಗೆ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕ ಮತದಾರಿದ್ದಾರೆ. ಇನ್ನು ಸೇವಾ ಮತದಾರರು 128 ಮಂದಿ ಇದ್ದಾರೆ ಎಂದು ಮಾಹಿತಿ ನೀಡಿದರು.

14,817 ಯುವ ಮತದಾರರು

ಜಿಲ್ಲೆಯಾದ್ಯಂತ ಕಾಲೇಜುಗಳಲ್ಲಿ ಮತದಾರರ ನೋಂದಣಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಂತಿಮ ಮತದಾರರ ಪಟ್ಟಿಯಲ್ಲಿ 18 ರಿಂದ 19 ವರ್ಷದೊಳಗಿನ 14,817 ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4173, ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3808, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3886, ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2950 ಯುವ ಮತದಾರರಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷ ನಿರಂತರವಾಗಿ ನಡೆಯುತ್ತಿರುತ್ತದೆ. 18 ವರ್ಷ ಮೇಲ್ಪಟ್ಟವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಚುನಾವಣಾ ಪ್ರಕ್ರಿಯೆಯು ಆಡಳಿತ ಯಂತ್ರಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ.

ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪಾತ್ರವು ಕೂಡ ಮುಖ್ಯವಾಗಿದ್ದು ಸಹಕಾರ ಹಾಗೂ ಸಹಭಾಗಿತ್ವ ಇರಲಿ ಎಂದು ರಾಜಕೀಯ ಪಕ್ಷಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ(ಪ್ರಬಾರ) ಹೇಮಾವತಿ ಜೆ, ಚುನಾವಣಾ ಶಿರಸ್ತೇದಾರ್ ಪ್ರಸಾದ್, ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

Yatnal: ಭಗವದ್ಗೀತೆಗೆ ಅಪಮಾನ; ಯತ್ನಾಳ್ ಆಕ್ರೋಶ| Video

Yatnal: ಭಗವದ್ಗೀತೆಗೆ ಅಪಮಾನ; ಯತ್ನಾಳ್ ಆಕ್ರೋಶ| Video

ಶಿಷ್ಟಾಚಾರ ಪಾಲನೆ ಆಗದೆ ಇದ್ದರೆ ಅದಕ್ಕೆ ದೂರು ನೀಡುವ ವ್ಯವಸ್ಥೆ ಇದೆ, ಪ್ರತಿಭಟನೆ ಮಾಡುವ ಹಕ್ಕಿದೆ ಆದರೆ ಗೀತೆಯ ಸಾರವನ್ನು ಹರಿದು ಹಾಕುವ ಹಕ್ಕು ಖಂಡಿತ ಇಲ್ಲ. Yatnal

[ccc_my_favorite_select_button post_id="100435"]
Bhusuraksha scheme: ಭೂಸುರಕ್ಷಾ ಯೋಜನೆಗೆ ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

Bhusuraksha scheme: ಭೂಸುರಕ್ಷಾ ಯೋಜನೆಗೆ ಚಾಲನೆ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಆನ್ ಲೈನ್ ಮೂಲಕ ಎಲ್ಲಾ ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಾಗಿಸುವ ರಾಜ್ಯ ಸರ್ಕಾರದ "ಭೂಸುರಕ್ಷಾ ಯೋಜನೆ" Bhusuraksha scheme

[ccc_my_favorite_select_button post_id="100471"]
ISRO Chief: ಇಸ್ರೋ ನೂತನ ಮುಖ್ಯಸ್ಥರಾಗಿ ವಿ ನಾರಾಯಣನ್ ನೇಮಕ..!

ISRO Chief: ಇಸ್ರೋ ನೂತನ ಮುಖ್ಯಸ್ಥರಾಗಿ ವಿ ನಾರಾಯಣನ್ ನೇಮಕ..!

ಎಸ್ ಸೋಮನಾಥ್ ಅವರ ಅಧಿಕಾರಾವಧಿ ಮುಗಿದ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ ವಿ ನಾರಾಯಣನ್ ISRO

[ccc_my_favorite_select_button post_id="100444"]
California; ಭೀಕರ ಕಾಡ್ಗಿಚ್ಚು: ಮನೆ, ವಾಹನ ಭಸ್ಮ..!| Video ನೋಡಿ

California; ಭೀಕರ ಕಾಡ್ಗಿಚ್ಚು: ಮನೆ, ವಾಹನ ಭಸ್ಮ..!| Video ನೋಡಿ

Pacific Palisade fire made Southern California look like an absolute Horror movie. Everyone is FORCED to evacuate, They are out of Water, Fighter Fighters, The wind is so strong that Tunker

[ccc_my_favorite_select_button post_id="100450"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Murder: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಪಾಪಿ

Murder: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಪಾಪಿ

ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಆರೋಪಿ ಗಂಗರಾಜುವನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. Murder

[ccc_my_favorite_select_button post_id="100474"]

ಆರೋಗ್ಯ

ಸಿನಿಮಾ

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಸುದ್ದಿ ವಾಹಿನಿ..! ಮಾತಲ್ಲೆ ಜಾಡಿಸಿದ ಕಿಚ್ಚ ಸುದೀಪ್

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಸುದ್ದಿ ವಾಹಿನಿ..! ಮಾತಲ್ಲೆ

ಇಬ್ಬರು ಅಭಿಮಾನಿಗಳ ನಡುವೆ ವಿಷ ಬೀಜ ಬಿತ್ತಲು ಆರಂಭಿಸಿದ ಖಾಸಗಿ ಚಾನಲ್ ಹಾಗೂ ಅದರ ನಿರೂಪಕಿಯ ಹೆಸರೇಳದೆ ಮಂಗಳಾರತಿ ಮಾಡಿದರು. Darshan Sudeep

[ccc_my_favorite_select_button post_id="99843"]

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು:

[ccc_my_favorite_select_button post_id="99803"]

Pushpa 2 ಅಲ್ಲು ಅರ್ಜುನ್ ಅವಾಂತರ; ಸಿಎಂ

[ccc_my_favorite_select_button post_id="99541"]

HD Kumaraswamy ಸಮಾಜದ ಶಾಂತಿ ಕಾಪಾಡುವ ಸಿನಿಮಾಗಳು

[ccc_my_favorite_select_button post_id="99321"]
error: Content is protected !!